ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಅನಾರೋಗ್ಯದ ನಡುವೆಯೂ `ಯಶೋದಾ’ ಚಿತ್ರದ ಪ್ರಚಾರದಲ್ಲಿ ತೊಡಗಿಕೊಂಡ ಸಮಂತಾ
ಟಾಲಿವುಡ್ ನ ಬಹು ನಿರೀಕ್ಷಿತ ಯಶೋದ ಸಿನಿಮಾ ನವೆಂಬರ್ 11ರಂದು ತೆರೆಗೆ ಬರಲಿದೆ. ಬಹುಭಾಷೆಯಲ್ಲಿ ಬಿಡುಗಡೆ ಆಗುತ್ತಿರುವ ಯಶೋದ ಚಿತ್ರದ ಪ್ರಮೋಷನ್ ಕೆಲಸದಲ್ಲಿ ಸಮಂತಾ ತೊಡಗಿಕೊಂಡಿದ್ದಾರೆ. ಅಲ್ಲದೆ ಕಾಯಿಲೆಯ ಬಳಿಕ ಇದೇ ಮೊದಲ ಭಾರಿಗೆ ಸಮಂತಾ ಅಭಿಮಾನಿಗಳ ಮುಂದೆ ಕಾಣಿಸಿಕೊಂಡಿದ್ದಾರೆ.
ಮೈಯೋಸಿಟಿಸ್ ಎಂಬುದು ಅಪರೂಪದ ಕಾಯಿಲೆಯಾಗಿದ್ದು, ಈ ಕಾಯಿಲೆ ಬಂದರೆ ವ್ಯಕ್ತಿ ಕುಗ್ಗುತ್ತಾನೆ. ದೇಹದಲ್ಲಿ ನೋವು ಕಾಣಿಸಿಕೊಳ್ಳುತ್ತದೆ. ಸ್ನಾಯು ಸೆಳೆತ ಶುರುವಾಗುತ್ತದೆ. ಸ್ವಲ್ಪ ದೂರ ನಡೆದರೂ ಸುಸ್ತು ಎನಿಸುತ್ತದೆ. 30-60ರ ವಯಸ್ಸಿನವರಲ್ಲಿ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ. ಇದಕ್ಕೆ ಸರಿಯಾದ ಚಿಕಿತ್ಸೆ ಕೊಡದೆ ಇದ್ದರೆ ದಿನ ಕಳೆದಂತೆ ಪರಿಸ್ಥಿತಿ ಬೇರೆಯ ಹಂತಕ್ಕೆ ಹೋಗುತ್ತದೆ. ಈಗ ಸಮಂತಾ ಕೂಡ ಇದೇ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಈ ಮಧ್ಯೆಯೂ ಸಮಂತಾ ಚಿತ್ರದ ಪ್ರಮೋಷನ್ ಕೆಲಸದಲ್ಲಿ ತೊಡಗಿಕೊಂಡಿದ್ದು ಆದಷ್ಟು ಬೇಗ ಸಮಂತಾ ಚೇತರಿಸಿಕೊಳ್ಳಲಿ ಎಂದು ಅಭಿಮಾನಿಗಳು ಹಾರೈಸುತ್ತಿದ್ದಾರೆ.
