ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಮತ್ತೊಂದು ಸಿನಿಮಾಗೆ ನಾಯಕನಾದ ಚಂದನ್ ಶೆಟ್ಟಿ: ವಿಜಯ ದಶಮಿಗೆ ಶುರುವಾಗಲಿದೆ ಚಿತ್ರ
ಚಂದನ್ ಶೆಟ್ಟಿಯ ಮುಂದಿನ ಸಿನಿಮಾವನ್ನು ಯುವ ನಿರ್ದೇಶಕ ಕಿರಣ್ ಕುಮಾರ್ ನಿರ್ದೇಶನ ಮಾಡುತ್ತಿದ್ದಾರೆ. ಇದು ಕ್ರೈಮ್ ಥ್ರಿಲ್ಲರ್ ಕಥಾ ಹಂದರ ಹೊಂದಿರುವ ಸಿನಿಮಾವಾಗಿದ್ದು ಚಂದನ್ ಈ ಸಿನಿಮಾದಲ್ಲಿ ನಾಯಕನಾಗಿ ನಟಿಸುವುದರ ಜೊತೆಗೆ ಸಂಗೀತ ನಿರ್ದೇಶಕನಾಗಿಯೂ ಕೆಲಸ ಮಾಡುತ್ತಿದ್ದಾರೆ.
ಚಂದನ್ ಶೆಟ್ಟಿ ನಟನೆಯ ಇನ್ನೂ ಹೆಸರಿಡದ ಸಿನಿಮಾವನ್ನು ನವರಸನ್ ನಿರ್ಮಾಣ ಮಾಡುತ್ತಿದ್ದಾರೆ. ರಾಧಿಕಾ ಕುಮಾರಸ್ವಾಮಿ ನಟನೆಯ ದಮಯಂತಿ ಸೇರಿದಂತೆ ಇನ್ನೂ ನಾಲ್ಕೈದು ಸಿನಿಮಾಗಳನ್ನು ನಿರ್ಮಾಣ ಮಾಡಿರುವ ನವರಸನ್ ಇದೀಗ ಚಂದನ್ ಶೆಟ್ಟಿ ಸಿನಿಮಾಗೆ ಬಂಡವಾಳ ಹೂಡುತ್ತಿದ್ದಾರೆ. ಕನ್ನಡ ಚಿತ್ರರಂಗದಲ್ಲಿ ಇತ್ತೀಚಿಗೆ ಹಾಡುಗಳ ಬಿಡುಗಡೆ, ಪ್ರೀ ರಿಲೀಸ್ ಇವೆಂಟ್ ಸೇರಿದಂತೆ ಸಾಕಷ್ಟು ಸಮಾರಂಭಗಳನ್ನು ಅದ್ದೂರಿಯಾಗಿ ಆಯೋಜಿಸುವುದರಲ್ಲಿ ಮುಂಚೂಣಿಯಲ್ಲಿರುವ ನವರಸನ್. ಈ ಚಿತ್ರವನ್ನು ನಿರ್ಮಾಣ ಮಾಡುವ ಜೊತೆಗೆ ಕ್ರಿಯೇಟಿವ್ ನಿರ್ದೇಶಕನಾಗಿಯೂ ಕಾರ್ಯನಿರ್ವಹಿಸುತ್ತಿದ್ದಾರೆ.
‘ಎಲ್ರ ಕಾಲೆಳಿಯತ್ತೆ ಕಾಲ’ ಸಿನಿಮಾದದಲ್ಲಿ 80ರ ದಶಕದ ಕಥೆ ಹೇಳಲಾಗಿದೆ. ಒಂದು ಘಟನೆ ಒಬ್ಬ ವ್ಯಕ್ತಿಯ ಜೀವನದಲ್ಲಿ ಯಾವೆಲ್ಲಾ ರೀತಿಯ ಪಾತ್ರ ವಹಿಸುತ್ತದೆ ಎಂಬುದನ್ನು ನಿರ್ದೇಶಕ ಸುಜಯ್ ಶಾಸ್ತ್ರೀ ಹೇಳಲಿದ್ದಾರೆ. ಚಿತ್ರದಲ್ಲಿ ನಟಿ ತಾರಾ ಅವರು ರಿಂದವ್ವ ಎಂಬ ವಿಭಿನ್ನವಾದ ಪಾತ್ರದಲ್ಲಿ ಕಾಣಿಸಿಕೊಂಡಿದ್ದು ಸದ್ಯದಲ್ಲೇ ಸಿನಿಮಾ ಥಿಯೇಟರ್ ಗೆ ಎಂಟ್ರಿಕೊಡಲಿದೆ.
