• March 15, 2026

ಪ್ರವಾಹ ಪೀಡಿತ ಪಾಕಿಸ್ತಾನಕ್ಕೆ ಭೇಟಿ ನೀಡಿದ ನಟಿ ಏಂಜಲೀನಾ ಜೋಲಿ

ಭೀಕರ ಮಳೆಯಿಂದ ತತ್ತರಿಸಿರುವ ಪಾಕಿಸ್ತಾನ ಅಕ್ಷರಶಃ ಬೆಚ್ಚಿ ಬಿದ್ದಿದೆ. ಮನೆ, ಮಠ ಕಳೆದುಕೊಂಡ ಜನ ಒಂದು ಹೊತ್ತಿನ ತುತ್ತಿಗೂ ಪರದಾಡುತ್ತಿದ್ದಾರೆ. ಇದೀಗ ಪಾಕಿಸ್ತಾನಕ್ಕೆ ಸಹಾಯ ಮಾಡಲು ಖ್ಯಾತ ನಟಿ ಏಂಜಲೀನಾ ಜೋಲಿ ಮುಂದೆ ಬಂದಿದ್ದಾರೆ. ಕಳೆದ ಮೂರು ದಶಕಗಳಿಂದ ಬಣ್ಣದ ಲೋಕದೊಂದಿಗೆ ನಂಟು ಹೊಂದಿರುವ ನಟಿ ಏಂಜಲೀನಾ ಜೋಲಿ ಜಗತ್ತೀನಾದ್ಯಂತ ಲಕ್ಷಾಂತರ ಅಭಿಮಾನಿಗಳನ್ನು ಹೊಂದಿದ್ದಾರೆ. ಇದೀಗ ಏಂಜಲೀನಾ ತಮ್ಮೆಲ್ಲಾ ಕೆಲಸಗಳನ್ನು ಬದಿಗೊತ್ತಿ ಪ್ರವಾಹ ಪೀಡಿತಾ ಪಾಕ್ ಗೆ ಭೇಟಿ ನೀಡಿದ್ದಾರೆ. ಸದ್ಯ ಏಂಜಲೀನಾ ಪಾಕ್ ಗೆ ಭೇಟಿ ನೀಡುರವ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಧಾರಕಾರ ಮಳೆಯ ಕಾಣದಿಂದ ಪಾಕ್ ಮಂದಿ ಬೀದಿಗೆ ಬಿದ್ದಿದ್ದಾರೆ. ಮನೆ ಮಠ ಕಳೆದುಕೊಂಡು ಒಂದು ಹೊತ್ತಿನ ಅನ್ನಕ್ಕೂ ಪರದಾಡುತ್ತಿದ್ದಾರೆ. ಇದರ ಜೊತೆಗೆ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಸಂಕ್ರಾಮಿಕ ಕಾಯಿಲೆಗಳು ಹರಡಲು ಶುರುವಾಗಿದೆ. ಈ ಹಿನ್ನೆಲೆಯಲ್ಲಿ ಇಲ್ಲಿನ ಜನರಿಗೆ ನೆರವಾಗಲು ಏಂಜಲೀನಾ ಜೋಲಿ ಅಮೇರಿಕಾದಿಂದ ಪಾಕಿಸ್ತಾನಕ್ಕೆ ಬಂದಿದ್ದಾರೆ. ಜಗತ್ತಿನಾದ್ಯಂತ ಇರುವ ನಿರಾಶ್ರಿತರ ಸಹಾಯಕ್ಕಾಗಿ ವಿಶ್ವಸಂಸ್ಥೆ ಹಲವು ಯೋಜನೆಗಳನ್ನು ಹಾಕಿಕೊಂಡಿದ್ದು, ಅದರ ಪ್ರತಿನಿಧಿಯಾಗಿ ಏಂಜಲೀನಾ ಜೋಲಿ ಅವರು ಕೆಲಸ ಮಾಡುತ್ತಿದ್ದಾರೆ. 2011ರಿಂದಲೂ ಏಂಜಲೀನಾ ಜೋಡಿ ಇದರ ಭಾಗವಾಗಿ ಕೆಲಸ ಮಾಡುತ್ತಿದ್ದಾರೆ. ಅದರ ಅಂಗವಾಗಿ ಅವರೀಗ ಪಾಕಿಸ್ತಾನಕ್ಕೆ ಭೇಟಿ ನೀಡಿ ಅಲ್ಲಿನ ಜನಗಳ ಸಹಾಯಕ್ಕೆ ಮುಂದಾಗಿದ್ದಾರೆ. ಈ ಹಿಂದೆ 2005ರಲ್ಲಿ ತೀವ್ರ ಭೂಕಂಪ ಸಂಭವಿಸಿದ ಸಂರ್ಭದಲ್ಲಿ ಹಾಗೂ 2010ರಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾದ ಸಂದರ್ಭದಲ್ಲಿ ಏಂಜಲೀನಾ ಪಾಕಿಸ್ತಾನಕ್ಕೆ ಭೇಟಿ ನೀಡಿ ಅಲ್ಲಿನ ಜನರಿಗೆ ಸಹಾಯ ಹಸ್ತ ಚಾಚಿದ್ದರು.

karnatakaspecial.in

https://karnatakaspecial.in/

Related post

Phone icon
Call Now
Reach us!
WhatsApp icon
Chat Now