• January 1, 2026

ಬಾಲಿವುಡ್ ನಟನ ಫೋಟೋ ದುರ್ಬಳಕೆ ಮಾಡಿಕೊಂಡು ಕಾಂಗ್ರೆಸ್: ಕಾನೂನು ಕ್ರಮಕ್ಕೆ ಮುಂದಾಗಲಿರೋ ಅನಿಲ್ ಅಯ್ಯರ್

ಸರ್ಕಾರಕ್ಕೆ ತೀವ್ರ ಮುಜುಗರ ತಂದಿರುವ ಸಿಎಂ ಬೊಮ್ಮಾಯಿ ಅವರ ಫೋಟೊಗಳಿರುವ `ಪೇ ಸಿಎಂ’ ಎಂಬ ಪೋಸ್ಟರ್‌ಗಳನ್ನು ಬೆಂಗಳೂರು ನಗರದ ಹಲವು ಕಡೆಗಳಲ್ಲಿ ಅಂಟಿಸಿದ್ದು ತೀವ್ರ ಸಂಚಲನ ಉಂಟುಮಾಡಿತು. ಕಳೆದ ಒಂದು ವಾರದಿಂದ ನಗರದಲ್ಲಿ ಈ ಕ್ಯಾಪೇನ್ ಜೋರಾಗಿಯೇ ಸದ್ದು ಮಾಡುತ್ತಿದೆ. ಈ ಮಧ್ಯೆ ಕಾಂಗ್ರೆಸ್ ಪಕ್ಷದ ಸೋಷಿಯಲ್ ಮೀಡಿಯಾದ ಪೇಜ್ ನಲ್ಲಿ ಬಾಲಿವುಡ್ ನಟ ಅಖಿಲ್ ಅಯ್ಯರ್ ಫೋಟೋವನ್ನು ದುರ್ಬಳಕೆ ಮಾಡಲಾಗಿದೆ ಎಂದು ಸ್ವತಃ ಅಖಿಲ್ ಸೋಷಿಯಲ್ ಮೀಡಿಯಾದಲ್ಲಿ ಆಕ್ರೋಶ ಹೊರ ಹಾಕಿದ್ದಾರೆ. ನನ್ನ ಫೋಟೋವನ್ನು ನನ್ನ ಅನುಮತಿ ಇಲ್ಲದೆ ಕಾಂಗ್ರೆಸ್ ಪಕ್ಷ ದುರ್ಬಳಕೆ ಮಾಡಿಕೊಂಡಿದ್ದು, ಇದರ ವಿರುದ್ಧ ಕಾನೂನು ಕ್ರಮಕ್ಕೆ ಮುಂದಾಗುವುದಾಗಿ ಅಖಿಲ್ ಅಯ್ಯರ್ ಟ್ವಿಟ್ ಮೂಲಕ ತಿಳಿಸಿದ್ದಾರೆ. ತಮ್ಮ ಟ್ವಿಟ್ ಅನ್ನು ರಾಹುಲ್ ಗಾಂಧಿ, ಸಿದ್ಧರಾಮಯ್ಯ  ಹಾಗೂ ಕರ್ನಾಟಕ ಕಾಂಗ್ರೆಸ್ ಪಕ್ಷದ ಖಾತೆ ಟ್ಯಾಗ್ ಮಾಡಿದ್ದು, ಘಟನೆಯಿಂದ ತಮಗೆ ತೀವ್ರ ನೋವಾಗಿದೆ ಎಂದು ಅಖಿಲ್ ಆಕ್ರೋಶ ಹೊರ ಹಾಕಿದ್ದಾರೆ. ಬೆಂಗಳೂರು ಮೂಲದ ಅಖಿಲ್ ಐಯ್ಯರ್ ಬೆಂಗಳೂರುನ ಸೇಂಟ್ ಜೋಸೆಫ್ ಬಾಯ್ಸ್ ಸ್ಕೂಲ್ ನಲ್ಲಿ ಶಿಕ್ಷಣ ಮುಗಿಸಿ ಬಳಿಕ ಬಾಲಿವುಡ್ ಗೆ ಎಂಟ್ರಿಕೊಟ್ಟಿದ್ದಾರೆ. ಈಗಾಗಲೇ ಕೆಲ ಸಿನಿಮಾಗಳಲ್ಲಿ ನಟಿಸಿರುವ ಅಖಿಲ್ ಕೆಲ ಜಾಹೀರಾತುಗಳಲ್ಲೂ ಕಾಣಿಸಿಕೊಂಡಿದ್ದಾರೆ.

karnatakaspecial.in

https://karnatakaspecial.in/

Related post

Phone icon
Call Now
Reach us!
WhatsApp icon
Chat Now