ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಗ್ರಾಹಕರಿಗೆ ಕರೆಂಟ್ ಶಾಕ್: ಮುಂದಿನ ತಿಂಗಳಿನಿಂದ 43 ಪೈಸೆ ಏರಿಕೆ
ಪ್ರತಿ ಮೂರು ತಿಂಗಳಿಗೊಮ್ಮೆ ಇಂಧನ ಹೊಂದಾಣಿಕೆ ಶುಲ್ಕವನ್ನು ಪರಿಷ್ಕರಿಸಲಾಗುತ್ತದೆ. ಆದರೆ ಗ್ರಾಹಕರಿಗೆ ಆಗುವ ಹೊರೆಯನ್ನು ತಪ್ಪಿಸಲು ಬೆಸ್ಕಾಂ ಈ ಶುಲ್ಕವನ್ನು ಆರು ತಿಂಗಳಿಗೆ ಆಗುವಂತೆ ಪರಿಷ್ಕರಿಸುತ್ತಿದೆ. ಕಳೆದ ಏಪ್ರಿಲ್ 2022ರಿಂದ ಜೂನ್ 2022ರ ವರೆಗೆ 643 ಕೋಟಿ ರೂಗಳಷ್ಟು ವಿದ್ಯುತ್ ಖರೀದಿ ವೆಚ್ಚ ಹೆಚ್ಚಳವಾಗಿದೆ.
ಕಳೆದ ಜುಲೈ ತಿಂಗಳಲ್ಲಿ ಇಂಧನ ಹೊಂದಾಣಿಕೆ ಶುಲ್ಕವನ್ನು ಆರು ತಿಂಗಳ ಅವಧಿಗೆ 31 ಪೈಸೆಯಷ್ಟು ಅನ್ವಯಿಸುವಂತೆ ಹೆಚ್ಚಳ ಮಾಡಿ ಕೆಇಆರ್‌ಸಿ ಆದೇಶ ಹೊರಡಿಸಿತ್ತು. ಸದ್ಯ ಕಲ್ಲಿದ್ದಲು ಖರೀದಿ ವೆಚ್ಚದಲ್ಲಿ ಗಣನೀಯ ಏರಿಕೆ ಕಂಡು ಬಂದ ಹಿನ್ನೆಲೆಯಲ್ಲಿ 43 ಫೈಸೆ ಹೆಚ್ಚಳ ಮಾಡಿ ಆದೇಶ ಹೊರಡಿಸಲಾಗಿದೆ.
