• March 14, 2026

ದೀಪಿಕಾ ಪಡುಕೋಣೆ ಆರೋಗ್ಯದಲ್ಲಿ ವ್ಯತ್ಯಯ: ಆಸ್ಪತ್ರೆಗೆ ದಾಖಲು

ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಆರೋಗ್ಯದಲ್ಲಿ ವ್ಯತ್ಯಾಸ ಕಂಡು ಬಂದಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದೀಪಿಕಾ ಪಡುಕೋಣೆ ದಾಖಲಾಗಿದ್ದು ಹಲವಾರು ಪರೀಕ್ಷೆಗಳನ್ನು ಮಾಡಿಸಿದ್ದಾರೆ ಎನ್ನಲಾಗುತ್ತಿದೆ. ಆದರೆ ಈ ಬಗ್ಗೆ ದೀಪಿಕಾ ಕುಟುಂಬಸ್ಥರಿಂದ ಯಾವುದೇ ಅಧಿಕೃತ ಮಾಹಿತಿ ದೊರೆತಿಲ್ಲ. ಸೆ.26ರ ಮಧ್ಯರಾತ್ರಿ ಏಕಾಏಕಿ ದೀಪಿಕಾ ಆರೋಗ್ಯದಲ್ಲಿ ವ್ಯತ್ಯಾಸ ಕಂಡುಬಂದಿದ್ದು ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮುಂಬೈನ ನಿವಾಸದಲ್ಲಿ ಇರುವಾಗಲೇ ಆರೋಗ್ಯದಲ್ಲಿ ವ್ಯತ್ಯಾಸ ಕಂಡು ಬಂದಿದೆ ಎಂದು ಪಿಂಕ್ ವಿಲ್ಲಾ ವರದಿ ಮಾಡಿದೆ. ಕಳೆದ ಕೆಲ ತಿಂಗಳ ಹಿಂದಷ್ಟೇ ಬಿಡುವಿಲ್ಲದ ಶೂಟಿಂಗ್ ನಲ್ಲಿ ತೊಡಗಿಕೊಂಡ ಹಿನ್ನೆಲೆಯಲ್ಲಿ ಆರೋಗ್ಯದಲ್ಲಿ ವ್ಯತ್ಯಾಸ ಕಂಡು ಬಂದು ದೀಪಿಕಾ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಆ ವೇಳೆಯೂ ದೀಪಿಕಾ ಆರೋಗ್ಯದ ಕುರಿತಾಗಿ ಯಾವುದೇ ಪ್ರತಿಕ್ರಿಯೆ ನೀಡಿರಲಿಲ್ಲ. ದೀಪಿಕಾ ಆರೋಗ್ಯದಲ್ಲಿ ಪದೇ ಪದೇ ಸಮಸ್ಯೆ ಕಾಣಿಸಿಕೊಳ್ಳುತ್ತಿರುವುದು ಅಭಿಮಾನಿಗಳ ಆತಂಕಕ್ಕೆ ಕಾರಣವಾಗಿದೆ. ಸದ್ಯ ದೀಪಿಕಾ ಆರೋಗ್ಯ ಸುಧಾರಿಸಿಕೊಂಡಿದೆ ಎನ್ನಲಾಗುತ್ತಿದೆ. ಆದರೆ ಈ ಬಗ್ಗೆ ಇನ್ನೂ ಯಾವುದೇ ಅಧಿಕೃತ ಮಾಹಿತಿ ಲಭ್ಯವಾಗಿಲ್ಲ.

karnatakaspecial.in

https://karnatakaspecial.in/

Related post

Phone icon
Call Now
Reach us!
WhatsApp icon
Chat Now