• March 20, 2026

ನಟ ಮಹೇಶ್ ಬಾಬು ತಾಯಿ ಇಂದಿರಾ ದೇವಿ ನಿಧನ

ಅನಾರೋಗ್ಯದಿಂದ ಬಳಲುತ್ತಿದ್ದ ನಟ ಮಹೇಶ್ ಬಾಬು ತಾಯಿ ಇಂದಿರಾ ದೇವಿ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಕಳೆದ ಕೆಲ ಸಮಯದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಇಂದಿರಾ ದೇವಿ ಇಂದು ಮುಂಜಾನೆ 4 ಗಂಟೆ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ. ಮಹೇಶ್ ತಾಯಿ ಅವರಿಗೆ ಹೈದರಾಬಾದ್ ನ ಪ್ರತಿಷ್ಠಿತ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಮಹೇಶ್ ತಾಯಿ ನಿಧನದ ಸುದ್ದಿ ಕೇಳಿ ಅಭಿಮಾನಿಗಳು ಶಾಕ್ ಆಗಿದ್ದಾರೆ. ಟಾಲಿವುಡ್ ಸೂಪರ್ ಸ್ಟಾರ್ ಮಹೇಶ್ ಬಾಬು ಸಿನಿಮಾ ರಂಗದ ಹಿನ್ನೆಲೆಯಿಂದ ಬಂದವರು. ಮಹೇಶ್ ಬಾಬು ತಂದೆ ಕೃಷ್ಣ ತೆಲುಗು ಇಂಡಸ್ಟ್ರಿಯಲ್ಲಿ ಸೂಪರ್ ಸ್ಟಾರ್ ಆಗಿ ಮಿಂಚಿ ಸಾಕಷ್ಟು ಹೆಸರು ಮಾಡಿದ್ದರು. ಕೃಷ್ಣ ಅವರ ಪುತ್ರ ರಮೇಶ್ ಬಾಬು ಈ ವರ್ಷದ ಆರಂಭದಲ್ಲಿ ನಿಧನರಾಗಿದ್ದರು. ಇದೀಗ ಮಹೇಶ್ ಬಾಬು ತಾಯಿ ನಿಧನರಾಗಿದ್ದು ಮಹೇಶ್ ಬಾಬು ಕುಟುಂಬದಲ್ಲಿ ಶೋಕ ಮಡುಗಟ್ಟಿದೆ. ಇಂದಿರಾ ದೇವಿ ಅವರ ಅಂತಿಮ ದರ್ಶನ ಬೆಳಗ್ಗೆ 9 ಗಂಟೆಯಿಂದ ಮಧ್ಯಾಹ್ನ 12 ಗಂಟೆಯವರೆಗೆ ಪದ್ಮಾಲಯ ಸ್ಡುಡಿಯೋಸ್​ನಲ್ಲಿ​ ವ್ಯವಸ್ಥೆ ಮಾಡಲಾಗುತ್ತಿ. ಬಳಿಕ ಕುಟುಂಬಸ್ಥರು ಅಂತ್ಯಕ್ರಿಯೆ ನಡೆಸಲು ಮುಂದಾಗಿದ್ದು ಸಕಲ ಸಿದ್ದತೆ ಮಾಡಿಕೊಂಡಿದ್ದಾರೆ. ಇರಿಸಲಾಗುವುದು. ನಂತರ ಅಂತ್ಯ ಸಂಸ್ಕಾರ ನಡೆಯಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ. ಸದ್ಯ ತ್ರಿವಿಕ್ರಮ್ ಶ್ರೀನಿವಾಸ್ ಜೊತೆ ಹೊಸ ಸಿನಿಮಾದ ಶೂಟಿಂಗ್ ನಲ್ಲಿ ತೊಡಗಿಕೊಂಡಿದ್ದ ಮಹೇಶ್ ಬಾಬು ಇದೀಗ ಕೆಲವು ದಿನಗಳ ಮಟ್ಟಿಗೆ ಸಿನಿಮಾದ ಕೆಲಸಗಳಿಗೆ ಬ್ರೇಕ್ ಹಾಕಿದ್ದಾರೆ.

karnatakaspecial.in

https://karnatakaspecial.in/

Related post

Phone icon
Call Now
Reach us!
WhatsApp icon
Chat Now