ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಜನಾರ್ದನ್ ರೆಡ್ಡಿ ಪುತ್ರ ಕಿರೀಟಿ ಚಿತ್ರದ ಟೈಟಲ್ ಲಾಂಚ್ ಗೆ ಕೌಂಟ್ ಡೌನ್
ಕಿರೀಟಿ ನಾಳೆ (ಸೆ.29)ರಂದು ಹುಟ್ಟುಹಬ್ಬ ಆಚರಿಸಿಕೊಳ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಅಂದೇ ಸಿನಿಮಾದ ಟೈಟಲ್ ಲಾಂಚ್ ಆಗಲಿದೆ ಎಂಬ ಮಾತು ಕೇಳಿ ಬರ್ತಿದೆ. ಸದ್ಯದ ಮಾಹಿತಿ ಪ್ರಕಾರ ನಾಳೆ ಸಂಜೆ ಸಂಜೆ 6.39ಕ್ಕೆ ವಾರಾಹಿ ಚಲನಚಿತ್ರ ಯೂಟ್ಯೂಬ್ ಚಾನೆಲ್ ನಲ್ಲಿ ಕಿರೀಟಿ ಮೊದಲ ಚಿತ್ರದ ಟೈಟಲ್ ಲಾಂಚ್ ವೀಡಿಯೋ ಬಿಡುಗಡೆಯಾಗೋದು ಪಕ್ಕ ಎನ್ನಲಾಗುತ್ತಿದೆ.
ರಾಧಾಕೃಷ್ಣ ರೆಡ್ಡಿ ನಿರ್ದೇಶನದ ಈ ಸಿನಿಮಾಗೆ ತೆಲುಗಿನ ಖ್ಯಾತ ನಿರ್ಮಾಣ ಸಂಸ್ಥೆ ವಾರಾಹಿ ಫಿಲ್ಮಂ ಬಂಡವಾಳ ಹೂಡಿದೆ. ಇದು ವಾರಾಹಿ ಸಂಸ್ಥೆಯ 15ನೇ ಸಿನಿಮಾವಾಗಿದ್ದು ಸಾಕಷ್ಟು ಅದ್ದೂರಿಯಾಗಿ ಸಿನಿಮಾ ರೆಡಿಯಾಗುತ್ತಿದೆ. ಕನ್ನಡ ಜೊತೆಗೆ ತೆಲುಗಿನಲ್ಲೂ ಈ ಸಿನಿಮಾ ನಿರ್ಮಾಣವಾಗಿದ್ದು ದೊಡ್ಡ ದೊಡ್ಡ ಕಲಾವಿದರು ಬಣ್ಣ ಹಚ್ಚಿದ್ದಾರೆ.
ಕಿರೀಟಿ ಸಿನಿಮಾದ ಮೂಲಕ ಸಾಕಷ್ಟು ವರ್ಷಗಳ ಬಳಿಕ ನಟಿ ಜೆನಿಲಿಯಾ ಸ್ಯಾಂಡಲ್ ವುಡ್ ಗೆ ಎಂಟ್ರಿಕೊಟ್ಟಿದ್ದಾರೆ. ಜೊತೆಗೆ ಕ್ರೇಜಿಸ್ಟಾರ್ ರವಿಚಂದ್ರನ್ ಕೂಡ ಕಿರೀಟಿಗೆ ಸಾಥ್ ನೀಡಿದ್ದಾರೆ. ಮೊದಲ ಸಿನಿಮಾದಲ್ಲೇ ಸಾಕಷ್ಟು ಭರವಸೆ ಮೂಡಿಸಿರೋ ಕಿರೀಟಿ ನಟನೆಯ ಸಿನಿಮಾದ ಶೀರ್ಷಿಕೆ ಏನಿರಲಿದೆ ಅನ್ನೋ ಕುತೂಹಲ ಈಗಾಗ್ಲೆ ಶುರುವಾಗಿದ್ದು ಅದಕ್ಕೆಲ್ಲಾ ಉತ್ತರ ನಾಳೆ ಸಂಜೆ ಸಿಗಲಿದೆ.
