• January 2, 2026

ಮೃತ ಪ್ರವೀಣ್ ನೆಟ್ಟಾರು ಪತ್ನಿಗೆ ಗ್ರೂಪ್ ಸಿ ಹುದ್ದೆ: ರಾಜ್ಯ ಸರ್ಕಾರದಿಂದ ಆದೇಶ

ಬೆಂಗಳೂರು: ದುಷ್ಕರ್ಮಿಗಳಿಂದ ಹತ್ಯೆಗೊಳಗಾದ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಅವರ ಪತ್ನಿ ನೂತನ ಕುಮಾರಿ ಅವರಿಗೆ ಗುತ್ತಿಗೆ ಆಧಾರದ ಮೇಲೆ ಮುಖ್ಯಮಂತ್ರಿ ಕಚೇರಿಯಲ್ಲಿ ಹಿರಿಯ ಸಹಾಯಕ ಹುದ್ದೆ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ದೊಡ್ಡಬಳ್ಳಾಪುರದಲ್ಲಿ ನಡೆದ ಜನಸ್ಪಂದನ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರವೀಣ್ ಕುಟುಂಬಕ್ಕೆ ಕೆಲಸ ನೀಡುವ ಭರವಸೆನೀಡಿದ್ದರು.ಅಂದರಂತೆ ಗುರುವಾಗಿ ಪ್ರವೀಣ್ ಪತ್ನಿ ನೂತನಾಕ ಕುಮಾರಿಗೆ ತಮ್ಮ ಕಚೇರಿಯಲ್ಲಿ ಗ್ರೂಪ್ ಸಿ ಹುದ್ದೆ ನೀಡಿ ಆದೇಶ ಹೊರಡಿಸಿದ್ದಾರೆ. ಈ ಬಗ್ಗೆ ಫೇಸ್​ಬುಕ್​ನಲ್ಲಿ ಪೇಜ್ ನಲ್ಲಿ ಬರೆದುಕೊಂಡಿರುವ ರಾಜ್ಯ ಬಿಜೆಪಿ, “ಮತಾಂಧರಿಂದ ಹತ್ಯೆಗೊಳಗಾದ ಬಿಜೆಪಿ ಕಾರ್ಯಕರ್ತ ದಿವಂಗತ ಪ್ರವೀಣ್ ನೆಟ್ಟಾರ್ ಅವರ ಪತ್ನಿ ನೂತನ ಕುಮಾರಿ ಎಂ. ಅವರನ್ನು ಮುಖ್ಯಮಂತ್ರಿ ಬಸವರಾಜ ಎಸ್. ಬೊಮ್ಮಾಯಿ ಅವರು ಮುಖ್ಯಮಂತ್ರಿ ಸಚಿವಾಲಯದಲ್ಲಿನ ಗ್ರೂಪ್ ಸಿ ಹುದ್ದೆಗೆ ನೇಮಕಗೊಳಿಸಿ ಆದೇಶ ಹೊರಡಿಸಿದ್ದಾರೆ. ಪಕ್ಷದ ಕಾರ್ಯಕರ್ತರೇ ಬಿಜೆಪಿ ಪಕ್ಷದ ಜೀವಾಳ. ಕಾರ್ಯಕರ್ತರ ಹಿತರಕ್ಷಣೆಗೆ ಬದ್ಧವಾಗಿದೆ ಬಿಜೆಪಿ” ಎಂದು ಬರೆದುಕೊಂಡಿದ್ದು , ಇದನ್ನ ಬಿಜೆಪಿ ಕರ್ನಾಟಕ ಟ್ವೀಟರ್ ಖಾತೆಯಲ್ಲೂ ಹಂಚಿಕೊಂಡಿದೆ. ಸುಳ್ಯ ತಾಲೂಕಿನ ಬೆಳ್ಳಾರೆ ಸಮೀಪದ ಪೆರುವಾಜೆ ಕ್ರಾಸ್ ನಲ್ಲಿ ಕೋಳಿ ಅಂಗಡಿ ನಡೆಸುತ್ತಿದ್ದ ಬಿಜೆಪಿ ಯುವ ಮೋರ್ಚಾ ಸದಸ್ಯ 31 ವರ್ಷದ ಪ್ರವೀಣ್ ಕುಮಾರ್ ನನ್ನು ಜುಲೈ 26 ರಂದು ರಾತ್ರಿ 8 ಗಂಟೆ ಸುಮಾರಿಗೆ ಭೀಕರವಾಗಿ ಹತ್ಯೆ ಮಾಡಿದ್ದರು. ಬೈಕ್ ನಲ್ಲಿ ಬಂದಿದ್ದ ಮೂವರು ದುಷ್ಕರ್ಮಿಗಳು ತಲ್ವಾರ್ ನಿಂದ ಪ್ರವೀಣ್ ಮೇಲೆ ಹಲ್ಲೆ ನಡೆಸಿದ್ದು ತಕ್ಷಣವೇ ಅವರನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಪ್ರವೀಣ್ ಮೇಲೆ ಬಲವಾಗಿ ಹಲ್ಲೆಯಾದ ಪರಿಣಾಮ ಪ್ರವೀಣ್ ಮೃತಪಟ್ಟಿದ್ದರು. ಪ್ರವೀನ್ ನಿಧನದ ಬಳಿಕ ರಾಜಕೀಯ ಮುಖಂಡರು ಪ್ರವೀಣ್ ಮನೆಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಧೈರ್ಯ ನೀಡಿದ್ದರು. ಇದೀಗ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೊಟ್ಟ ಮಾತಿನಂತೆ ಪ್ರವೀನ್ ಪತ್ನಿ ನೂತನಾಗೆ ತಮ್ಮ ಕಚೇರಿಯಲ್ಲೇ ಕೆಲಸ ನೀಡಿದ್ದಾರೆ.

karnatakaspecial.in

https://karnatakaspecial.in/

Related post

Phone icon
Call Now
Reach us!
WhatsApp icon
Chat Now