ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ಖ್ಯಾತ ನಟಿ ಆಶಾ ಪರೇಖ್
ಕಳೆದ ಬಾರಿ ದಾದಾ ಸಾಹೇಬ್ ಪಾಲ್ಕೆ ಪ್ರಶಸ್ತಿಯನ್ನು ತಮಿಳು ಚಿತ್ರರಂಗದ ಸೂಪರ್ ಸ್ಟಾರ್ ರಜನಿಕಾಂತ್ ಅವರಿಗೆ ನೀಡಿ ಗೌರವಿಸಲಾಗಿತ್ತು. ಈ ಬಗ್ಗೆ ಕಳೆದ ಕೆಲವು ದಿನಗಳ ಹಿಂದೆ ಕೇಂದ್ರ ಸಚಿವ ಅನುರಾಗ್ ಠಾಕೂರ್ ಹೇಳಿಕೆಯನ್ನು ಎಎನ್ ಐ ಸಂಸ್ಥೆ ತನ್ನ ಅಧಿಕೃತ ಟ್ವೀಟರ್ ಖಾತೆಯಲ್ಲಿ ಹಂಚಿಕೊಂಡಿತ್ತು.
ಬಾಲ ನಟಿಯಾಗಿ ಚಿತ್ರರಂಗಕ್ಕೆ ಎಂಟ್ರಿಕೊಟ್ಟ ಆಶಾ ಪರೇಖ್ 1959ರಲ್ಲಿ ತೆರೆಕಂಡ ದಿಲ್ ದೇಕೆ ದೇಖೋ ಸಿನಿಮಾದ ಮೂಲಕ ನಾಯಕಿಯಾಗಿ ಬಣ್ಣ ಹಚ್ಚಿದರು. ಬಾಲಿವುಡ್ ಚಿತ್ರರಂಗದ ಸಾಕಷ್ಟು ಸ್ಟಾರ್ ನಟರ ಜೊತೆ ತೆರೆ ಹಂಚಿಕೊಂಡ ಆಶಾ ಪರೇಖ್ ಕೊನೆಯದಾಗಿ ನಟಿಸಿದ್ದು 1995ರಲ್ಲಿ ತೆರೆಕಂಡ ಆಂದೋಲನ್ ಸಿನಿಮಾದಲ್ಲಿ. 79ರ ಹರೆಯದಲ್ಲೂ ಸಿನಿಮಾ ರಂಗದ ಜೊತೆ ಉತ್ತಮ ಬಾಂದವ್ಯ ಹೊಂದಿದ್ದು ಆಶಾ ಪರೇಖ್ ಗೆ ದಾದಾ ಸಾಹೇಬ್ ಪಾಲ್ಕೆ ಪ್ರಶಸ್ತಿ ಬಂದಿರೋದು ಅಭಿಮಾನಿಗಳಿಗೆ ಖುಷಿ ನೀಡಿದೆ.
