ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಎಲ್ಲೆಲ್ಲೂ ರಿಷಬ್ ಶೆಟ್ಟಿಯದ್ದೇ ಹವಾ: ಕಾಂತಾರ ಡಬ್ಬಿಂಗ್ ಗೆ ಭರ್ಜರಿ ಡಿಮ್ಯಾಂಡ್
ದಿನದಿಂದ ದಿನಕ್ಕೆ ಕಾಂತಾರ ಕ್ರೇಜ್ ಮತ್ತಷ್ಟು ಹೆಚ್ಚುತ್ತಿದೆ. ಸಿನಿಮಾವನ್ನು ಬೇರೆ ಬೇರೆ ಭಾಷೆಗೆ ಡಬ್ ಮಾಡಬೇಕು ಎಂಬ ಮಾತು ಕೇಳಿ ಬರ್ತಿದೆ. ಈ ಹಿನ್ನೆಲೆಯಲ್ಲಿ ಕಾಂತಾರ ಚಿತ್ರದ ನಿರ್ಮಾಣ ಸಂಸ್ಥೆ ಹೊಂಬಾಳೆ ಚಿತ್ರವನ್ನು ಬೇರೆ ಬೇರೆ ಭಾಷೆಯಲ್ಲೂ ರಿಲೀಸ್ ಮಾಡೋಕೆ ಪ್ಲ್ಯಾನ್ ಮಾಡಿಕೊಂಡಿದೆ.
ಕಾಂತಾರ ಸಿನಿಮಾ ಡಬ್ಬಿಂಗ್ ಪ್ಲಾನ್ ನಡೀತಾ ಇದೆ. ತೆಲುಗು, ತಮಿಳು, ಹಿಂದಿ ಭಾಷೆಯಲ್ಲೂ ಕಾಂತಾರ ಸಿನಿಮಾ ರಿಲೀಸ್ ಆಗುತ್ತದೆ. ಎಂದು ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಹೇಳಿದ್ದಾರೆ. ಈಗಾಗಲೇ ಆಯಾ ಭಾಷೆಯ ಸಿನಿಮಾ ವಿತರಕರು ಈ ಬೇಡಿಕೆಯನ್ನ ಹೊಂಬಾಳೆ ಪ್ರೋಡಕ್ಷನ್ ಹೌಸ್ ಅನ್ನ ಸಂಪರ್ಕಿಸುತ್ತಿದ್ದಾರೆ. ಶೀಘ್ರದಲ್ಲಿಯೇ ಪ್ರೋಡಕ್ಷನ್ ಹೌಸ್ ತಮ್ಮ ಸಿನಿಮಾ ಕಾಂತಾರ ಇತರ ಭಾಷೆಯಲ್ಲಿ ಡಬ್ಬಿಂಗ್ ಆಗಿ ರಿಲೀಸ್ ಮಾಡುವ ಬಗ್ಗೆ ಮಾಹಿತಿ ನೀಡಿಲಿದ್ದಾರೆ ಎಂದು ರಿಷಬ್ ಶೆಟ್ಟಿ ಹೇಳಿದ್ದಾರೆ.
