• March 16, 2026

ಪೊನ್ನಿಯನ್ ಸೆಲ್ವನ್ ಸಿನಿಮಾ ನೋಡಿ ಚೋಳ ರಾಜರು ಹಿಂದೂಗಳಲ್ಲ ಎಂದ ಕಮಲ್ ಹಾಸನ್

ಖ್ಯಾತ ನಿರ್ದೇಶಕ ಮಣಿರತ್ನಂ ನಿರ್ದೇಶನದ ಪೊನ್ನಿಯನ್ ಸೆಲ್ವನ್ ಸಿನಿಮಾ ಬಾಕ್ಸ್ ಆಫೀಸ್ ನಲ್ಲಿ ಭರ್ಜರಿ ಕಲೆಕ್ಷನ್ ಮಾಡುತ್ತಿದೆ. ಸ್ಟಾರ್ ಕಲಾವಿದರ ದಂಡೇ ಪೊನ್ನಿಯನ್ ಸೆಲ್ವನ್ ಸಿನಿಮಾದಲ್ಲಿ ಬಣ್ಣ ಹಚ್ಚಿದ್ದು ಇದುವರೆಗೂ ಸಿನಿಮಾ 250 ಕೋಟಿಗೂ ಅಧಿಕ ಕಲೆಕ್ಷನ್ ಮಾಡಿದೆ. ಇದೀಗ ಖ್ಯಾತ ನಟ ಕಮಲ್ ಹಾಸನ್ ಸಿನಿಮಾದ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಪೊನ್ನಿಯನ್ ಸೆಲ್ವನ್ ಸಿನಿಮಾ ವೀಕ್ಷಿಸಿದ ನಟ ಕಮಲ್ ಹಾಸನ್ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಪೊನ್ನಿಯಲ್ ಸೆಲ್ವನ್ ಸಿನಿಮಾದ ಕಥೆ ಚೆನ್ನಾಗಿದ್ದರೆ ಸಿನಿಮಾ ಗೆಲ್ಲುತ್ತದೆ ಎನ್ನುವುದಕ್ಕೆ ಈ ಚಿತ್ರವೇ ಸಾಕ್ಷಿ ಎಂದಿದ್ದಾರೆ. ಆಂಧ್ರದಲ್ಲಿ ಈ ಚಿತ್ರಕ್ಕೆ ಬೆಂಬಲ ಸಿಗುತ್ತಿಲ್ಲ ಎನ್ನುವ ಹೇಳಿಕೆಯನ್ನು ಅಲ್ಲಗಳೆದಿರುವ ಕಮಲ್ ಹಾಸನ್, ಯಾರೋ ಹೇಳುತ್ತಾರೆ ಅಂತ ನಂಬೋದು ಬೇಡ. ತೆಲುಗಿನಲ್ಲೂ ಈ ಚಿತ್ರಕ್ಕೆ ಉತ್ತಮ ಬೆಂಬಲ ವ್ಯಕ್ತವಾಗಿದೆ ಎಂದು ಕಮಲ್ ಹಾಸನ್ ಹೇಳಿದ್ದಾರೆ. ಪೊನ್ನಿಯಿನ್ ಸೆಲ್ವನ್ ಸಿನಿಮಾದ ಕಥಾ ಹಂದರದ ಕುರಿತು ಮಾತನಾಡಿರುವ ಕಮಲ್, ಚೋಳ ರಾಜರು ಹಿಂದೂಗಳಲ್ಲ ಎಂದಿದ್ದಾರೆ. ‘ಚೋಳನ ಕಾಲದಲ್ಲಿ ಹಿಂದೂ ಧರ್ಮವೇ ಇರಲಿಲ್ಲ. ರಾಜರಾಜ ಚೋಳನು ಆಳುತ್ತಿದ್ದ ವೇಳೆ ಶೈವ ಮತ್ತು ವೈಷ್ಣವ ಧರ್ಮ ಮಾತ್ರವಿತ್ತು. ಬ್ರಿಟಿಷರು ನಮ್ಮ ದೇಶಕ್ಕೆ ಬಂದಾಗ ನಮ್ಮನ್ನ ಹೇಗೆ ಕರೆಯಬೇಕು ಎಂದು ಅವರಿಗೆ ಗೊತ್ತಾಗಲಿಲ್ಲ. ಆನಂತರ ಅವರು ಹಿಂದೂ ಎಂದು ಕರೆದರು ಎಂದು ಕಮಲ್ ಹಾಸನ್ ಹೇಳಿದ್ದಾರೆ. ಸದ್ಯ ಕಮಲ್ ಹಾಸನ್ ಹೇಳಿಕೆ ವಿವಾದಕ್ಕೆ ಕಾರಣವಾಗಿದೆ. ತಮಿಳಿನ ಖ್ಯಾತ ನಿರ್ದೇಶಕ ಮೆಟ್ರಿಮಾರನ್ ಕೂಡ ಪೊನ್ನಿಯಲ್ ಸೆಲ್ವನ್ ಸಿನಿಮಾದ ಕುರಿತು ಪ್ರತಿಕ್ರಿಯಿಸಿದ್ದು, ರಾಜರಾಜ ಚೋಳನು ಹಿಂದೂ ಆಗಿರಲಿಲ್ಲ ಎಂದಿದ್ದರು. ‘ನಿರಂತರವಾಗಿ ನಮ್ಮಅಸ್ಮಿತೆಯನ್ನು ಕಸಿದುಕೊಳ್ಳಲಾಗುತ್ತಿದೆ. ವಳ್ಳುವರ್ ಅವರನ್ನು ಕೇಸರಿಕರಣ ಮಾಡುವುದು ಹಾಗೂ ರಾಜ ರಾಜ ಚೋಳನನ್ನು ಹಿಂದೂ ಎಂದು ಕರೆಯುವುದು ನಡೆದೇ ಇದೆ’ ಎಂದಿದ್ದರು. ವೆಟ್ರಿಮಾರನ್ ಮಾತಿಗೆ ತಿರುಗೇಟು ನೀಡಿದ ಬಿಜೆಪಿ ಮುಖಂಡ ಎಚ್.ರಾಜಾ ‘ನಿರ್ದೇಶಕ ವೆಟ್ರಿಮಾರನ್ ಅವರಿಗೆ ಇತಿಹಾಸ ಚೆನ್ನಾಗಿ ತಿಳಿದಿಲ್ಲ. ಅವರು ಇತಿಹಾಸವನ್ನು ಸರಿಯಾಗಿಯೂ ಓದಿಕೊಂಡಿಲ್ಲ. ರಾಜ ರಾಜ ಚೋಳನು ನಿರ್ಮಿಸಿದ ಎರಡು ಮಸೀದಿ ಅಥವಾ ಚರ್ಚ್ ತೋರಿಸಲಿ’ ಎಂದಿದ್ದರು.

karnatakaspecial.in

https://karnatakaspecial.in/

Related post

Phone icon
Call Now
Reach us!
WhatsApp icon
Chat Now