ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಮಾಲ್ಡೀವ್ಸ್ನಿಂದ ಸೆಲ್ಫಿ ಶೇರ್ ಮಾಡಿದ ರಶ್ಮಿಕಾ ಮಂದಣ್ಣ: ಜೊತೆಗಿದ್ದಾರಾ ವಿಜಯ್ ದೇವರಕೊಂಡ?
ನಿನ್ನೆ ತಾನೇ ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡ ಕೆಲವೇ ನಿಮಿಷಗಳ ಅಂತರದಲ್ಲಿ ಮುಂಬೈ ವಿಮಾನ ನಿಲ್ದಾಣ ಕಾಣಿಸಿಕೊಂಡಿದ್ದರು. ಈ ಜೋಡಿ ವೆಕೇಶನ್ಗಾಗಿ ಮಾಲ್ಡೀವ್ಸ್ ತೆರಳಲಿದ್ದಾರೆ ಎನ್ನಲಾಗಿತ್ತು. ಈಗ ಆ ವಿಚಾರ ನಿಜವಾಗಿದೆ ಎನ್ನಲಾಗುತ್ತಿದೆ.
ಸದ್ಯ ರಶ್ಮಿಕಾ ಹಂಚಿಕೊಂಡಿರುವ ಫೋಟೋ ವೈರಲ್ ಆಗಿದೆ. ಅಲ್ಲದೆ ರಶ್ಮಿಕಾ ಜೊತೆ ವಿಜಯ್ ದೇವರಕೊಂಡಾ ಇದ್ದಾರಾ ಎಂದು ಪ್ರಶ್ನೆ ಮಾಡುತ್ತಿದ್ದಾರೆ. ಇನ್ನೂ ಕೆಲವರು ವಿಜಯ್ ನಿಮ್ಮ ಜೊತೆಗಿಲ್ಲ ಅನ್ನೋದು ಗೊತ್ತಿದೆ ಎಂದು ಕಾಮೆಂಟ್ ಮಾಡುತ್ತಿದ್ದಾರೆ. ಆದರೆ ಯಾವುದಕ್ಕೂ ಪ್ರತಿಕ್ರಿಯೆ ನೀಡದ ರಶ್ಮಿಕಾ ಮಂದಣ್ಣ ಮಾಲ್ಡೀವ್ಸ್ ನಲ್ಲಿ ಹಾಲಿಡೇ ಎಂಜಾಯ್ ಮಾಡ್ತಿದ್ದಾರೆ.
