ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಪ್ರೇಮ್, ಧ್ರುವ ಸರ್ಜಾ ಕಾಂಬಿನೇಷನ ಚಿತ್ರದ ಟೈಟಲ್ ಟೀಸರ್ ಲಾಂಚ್ ಗೆ ಸಂಜಯ್ ದತ್ ಗೆ ಆಹ್ವಾನ
ಅಂದ ಹಾಗೆ ಪ್ರೇಮ್ ಹಾಗೂ ಧ್ರುವ ಸರ್ಜಾ ಕಾಂಬಿನೇಷನ್ ನ ಸಿನಿಮಾದಲ್ಲಿ ನಟ ಸಂಜಯ್ ದತ್ ಕೂಡ ಇರಲಿದ್ದಾರೆ ಎಂದು ಹೇಳಲಾಗುತ್ತಿದೆ. ಈಗಾಗ್ಲೆ ಕೆಜಿಎಫ್2 ಸಿನಿಮಾದ ಮೂಲಕ ಸ್ಯಾಂಡಲ್ ವುಡ್ ಗೆ ಎಂಟ್ರಿಕೊಟ್ಟಿರುವ ಸಂಜಯ್ ದತ್ ಇದೀಗ ಮತ್ತೆ ಧ್ರುವ ಸರ್ಜಾ ಚಿತ್ರದ ಮೂಲಕ ಗಾಂಧಿನಗರಕ್ಕೆ ಎಂಟ್ರಿಕೊಡ್ತಿದ್ದಾರೆ ಎನ್ನಲಾಗುತ್ತಿದೆ.
ಸಿನಿಮಾ ರಂಗದವರ ಜೊತೆ ಟೈಟಲ್ ಅನಾವರಣ ಕಾರ್ಯಕ್ರಮಕ್ಕೆ ರಾಜಕೀಯ ಗಣ್ಯರಿಗೂ ಆಹ್ವಾನ ನೀಡಲಾಗಿದೆ. ನಿನ್ನೆಯಷ್ಟೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿ ಮಾಡಿರುವ ಪ್ರೇಮ್ ಅವರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಿದ್ದಾರೆ. ಕಾರ್ಯಕ್ರಮಕ್ಕೆ ಬರುವ ಭರವಸೆಯನ್ನು ಮುಖ್ಯಮಂತ್ರಿಗಳು ನೀಡಿದ್ದಾರೆ.
