ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಜನ ಸೇವೆಗಾಗಿ ಈ ಬಾರಿ ಕಾಂಗ್ರೆಸ್ ನಿಂದ ಚುನಾವಣೆಗೆ ನಿಲ್ತೀನಿ: ನಟಿ ಭಾವನಾ
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆಯಲ್ಲಿ ಭಾಗಿಯಾಗಿ ಮಾತನಾಡಿದ ಭಾವನ, ನಾನು ಈ ಬಾರಿ ಕಾಂಗ್ರೆಸ್‌ನಿಂದ ಟಿಕೆಟ್ ಕೇಳ್ತೀನಿ. ಜನರ ಸೇವೆಗಾಗಿ ನಾನು ಚುನಾವಣೆಗೆ ನಿಲ್ತೀನಿ. ಮುಂದೆ ಕೇಂದ್ರ ಹಾಗೂ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತದೆ ಎಂದರು.
ದೇಶದಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಲು ರಾಹುಲ್ ಗಾಂಧಿ ನೇತೃತ್ವದ ಕಾಂಗ್ರೆಸ್ ಶತ ಪ್ರಯತ್ನ ನಡೆಸುತ್ತಿದೆ. ಸೆಪ್ಟೆಂಬರ್ 30ರಿಂದ ಶುರುವಾದ ಯಾತ್ರೆ ಅಕ್ಟೋಬರ್ 14ರ ವರೆಗೂ ನಡೆಯಲಿದೆ. ಮಳೆ ಗಾಳಿಯನ್ನು ಲೆಕ್ಕಿಸದೆ ರಾಹುಲ್ ಯಾತ್ರೆಯಲ್ಲಿ ಭಾಗಿಯಾಗುತ್ತಿದ್ದಾರೆ. ಕನ್ಯಾಕುಮಾರಿ ವರೆಗೂ ಭಾರತ್ ಜೋಡೋ ಯಾತ್ರೆ ಹಮ್ಮಿಕೊಂಡಿದ್ದು ದಿನದಿಂದ ದಿನಕ್ಕೆ ಯಾತ್ರೆಯಲ್ಲಿ ಹೆಚ್ಚು ಹೆಚ್ಚು ಜನ ಭಾಗಿಯಾಗುತ್ತಿದ್ದಾರೆ.
