• January 2, 2026

‘ಪುನೀತ್ ಪರ್ವ’ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿಗಳಿಗೆ ಆಹ್ವಾನ ನೀಡಿದ ಡಾ.ರಾಜ್ ಕುಟುಂಬ

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಟನೆಯ ಗಂಧದ ಗುಡಿ ಸಾಕ್ಷ್ಯ ಚಿತ್ರ ತೆರೆಗೆ ಬರಲು ಇನ್ನೂ ಕೆಲವೇ ಕೆಲವು ದಿನಗಳು ಮಾತ್ರವೇ ಭಾಕಿ ಇದೆ. ಅದಕ್ಕೂ ಮುನ್ನ ರಾಜ್ ಕುಟುಂಬ ಪ್ರೀ ರಿಲೀಸ್ ಈವೆಂಟ್ ಹಮ್ಮಿಕೊಂಡಿದ್ದು ಅದಕ್ಕಾಗಿ ಭರ್ಜರಿ ತಯಾರಿ ಮಾಡಿಕೊಳ್ಳುತ್ತಿದೆ. ಇದೀಗ ಪುನೀತ್ ಪರ್ವ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಬಸರವಾಜ ಬೊಮ್ಮಾಯಿ ಅವರನ್ನು ಡಾ.ರಾಜ್ ಕುಟುಂಬ ಆಹ್ವಾನ ನೀಡಿದ್ದಾರೆ. ಪುನೀತ್ ರಾಜ್ ಕುಮಾರ್ ರ ಕನಸಿನ ಪ್ರಾಜೆಕ್ಟ್ ಗಂಧದ ಗುಡಿ ಟ್ರೈಲರ್ ಈಗಾಗ್ಲೆ ಅಭಿಮಾನಿಗಳ ಮನ ಗೆದ್ದಿದೆ. ಇದೀಗ ಪ್ರೀ ರಿಲೀಸ್ ಈವೆಂಟ್ ಕಾರ್ಯಕ್ರಮವನ್ನು ಸಾಕಷ್ಟು ಅದ್ದೂರಿಯಾಗಿ ನಡೆಸಲು ರಾಜ್ ಕುಟುಂಬ ಮುಂದಾಗಿದೆ. ಅಲ್ಲದೆ ಸಾಕ್ಷ್ಯ ಚಿತ್ರವನ್ನು ಚಿತ್ರಮಂದಿರದಲ್ಲೇ ಬಿಡುಗಡೆ ಮಾಡುವ ಯೋಜನೆ ರೂಪಿಸಿಕೊಂಡಿದೆ. ಇದೇ 21ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಪುನೀತ್ ಪರ್ವ ಕಾರ್ಯಕ್ರಮ ನಡೆಯಲಿದ್ದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆ ವಹಿಸುವಂತೆ ಪುನೀತ್ ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಮನವಿ ಮಾಡಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಅಶ್ವೀನಿ ಪುನೀತ್ ರಾಜ್ ಕುಮಾರ್, ರಾಘವೇಂದ್ರ ರಾಜ್ ಕುಮಾರ್, ಯುವರಾಜ್ ಕುಮಾರ್ ಆತ್ಮೀಯವಾಗಿ ಆಮಂತ್ರಣ ನೀಡಿದ್ದಾರೆ. ಪುನೀತ್ ಪರ್ವ ಕಾರ್ಯಕ್ರಮದ ಆಹ್ವಾನ ಪತ್ರಿಕೆಯನ್ನು ಸಾಕಷ್ಟು ಅದ್ದೂರಿಯಾಗಿ ರೆಡಿ ಮಾಡಲಾಗಿದೆ. ಈ ಆಹ್ವಾನ ಪತ್ರಿಕೆಯನ್ನು ಸಂಪೂರ್ಣ ಮರದಿಂದ ತಯಾರಿಸಲಾಗಿದ್ದು, ಪತ್ರಿಕೆ ಜೊತೆಗೆ ಪುನೀತ್​ ರಾಜ್​ಕುಮಾರ್ ಪುತ್ಥಳಿಯನ್ನು ಇರಿಸಲಾಗಿದೆ. ಅಲ್ಲದೆ ಶ್ರೀಗಂಧದ ತುಂಡಿನ ಮೇಲೆ ಪುನೀತ್ ರಾಜ್​ಕುಮಾರ್​ಎಂದು ಬರೆದಿರುವ ಹಸ್ತಾಕ್ಷರ ಮುದ್ರಣ ಮಾಡಲಾಗಿದೆ. ಈಗಾಗಲೇ ಗಂಧದ ಗುಡಿ ಪ್ರೀರಿಲೀಸ್ ಕಾರ್ಯಕ್ರಮದ ಆಹ್ವಾನ ಪತ್ರಿಕೆ ಅನೇಕರ ಕೈ ಸೇರಿದ್ದು ಇದೀಗ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಕೈ ಸೇರಿದೆ.

karnatakaspecial.in

https://karnatakaspecial.in/

Related post

Phone icon
Call Now
Reach us!
WhatsApp icon
Chat Now