• June 19, 2026

ಹಿಜಬ್ ವಿವಾದ: ಇಂದು ಸುಪ್ರೀಂ ತೀರ್ಪು ಪ್ರಕಟ

ನವದೆಹಲಿ:  ಉಡುಪಿಯಲ್ಲಿ ಆರಂಭವಾಗಿ ರಾಷ್ಟ್ರ ಮಟ್ಟದಲ್ಲಿ ಭಾರೀ ಸದ್ದು ಮಾಡಿದ ಹಿಜಾಬ್ ವಿವಾದಕ್ಕೆ ಸಂಬಂಧಿಸಿದ ಮಹತ್ವದ ತೀರ್ಪನ್ನು ಇಂದು ಸುಪ್ರೀಂ ಕೋರ್ಟ್ ಪ್ರಕಟಿಸುವ ಸಾಧ್ಯತೆ ಇದೆ. ಶಾಲಾ ಕಾಲೇಜುಗಳಲ್ಲಿ ಹುಟ್ಟಿಕೊಂಡ ಹಿಜಾಬ್ ನಿರ್ಬಂಧ ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಹಲವು ಅರ್ಜಿಗಳ ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್ ಕಳೆದ ಮೂರು ವಾರಗಳ ಹಿಂದೆ ತೀರ್ಪು ಕಾಯ್ದಿರಿಸಿತ್ತು. ಇದೀಗ ಇಂದು ತೀರ್ಪು ಪ್ರಕಟವಾಗಲಿದೆ. ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಹೇಮಂತ್ ಗುಪ್ತಾ ಇದೇ 16ರಂದು ನಿವೃತ್ತಿಯಾಗಲಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ತೀರ್ಪು ಕಾಯ್ದಿರಿಸುವ ಸಾಧ್ಯತೆ ಇದೆ. ಕಳೆದ ಮಾರ್ಚ್ 15 ರಂದು, ಕರ್ನಾಟಕದ ಉಡುಪಿಯ ಸರ್ಕಾರಿ ಪದವಿ ಪೂರ್ವ ಬಾಲಕಿಯರ ಕಾಲೇಜಿನಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರ ಒಂದು ಗುಂಪು ತರಗತಿಯೊಳಗೆ ಹಿಜಾಬ್ ಧರಿಸಲು ಅನುಮತಿ ಕೋರಿ ಸಲ್ಲಿಸಿದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿತ್ತು. ಅಲ್ಲದೆ ಹಿಜಬ್ ಅಗತ್ಯ ಧಾರ್ಮಿಕ ಆಚರಣೆಯ ಭಾಗವಲ್ಲ ಎಂದು ತೀರ್ಪು ನೀಡಿತ್ತು. ಫೆಬ್ರವರಿ 5, 2022 ರ ರಾಜ್ಯ ಸರ್ಕಾರದ ಆದೇಶವನ್ನು ಕೆಲವು ಮುಸ್ಲಿಂ ಹುಡುಗಿಯರು ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದು ಇಂದು ಹೈಕೋರ್ಟ್ ನಲ್ಲಿ ತೀರ್ಪು ಬರುವ ಸಾಧ್ಯತೆ ಇದೆ.

karnatakaspecial.in

https://karnatakaspecial.in/

Related post

Phone icon
Call Now
Reach us!
WhatsApp icon
Chat Now