ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಅದ್ದೂರಿಯಾಗಿ ನೆರವೇರಿತು ಶಿವರಾಜ್ ಕುಮಾರ್ ನಟನೆಯ ಘೋಸ್ಟ್ ಸಿನಿಮಾದ ಮುಹೂರ್ತ
ಘೋಸ್ಟ್ ಸಿನಿಮಾಗಾಗಿ ಸುಮಾರು ಮೂರು ಕೋಟಿ ವೆಚ್ಚದಲ್ಲಿ ಅದ್ದೂರಿ ಸೆಟ್ ಹಾಕಲಾಗಿದೆ. ಮಿನರ್ವ ಮಿಲ್ ನಲ್ಲಿ ಸುಮಾರು 24 ದಿನಗಳ ಕಾಲ ಶೂಟಿಂಗ್ ನಡೆಯಲಿದ್ದು ಜೈಲ್ ಸೆಟ್ ನಿರ್ಮಾಣ ಮಾಡಲಾಗಿದೆ. ಅಲ್ಲದೆ ಮಿನರ್ವ ಮಿಲ್ ನಲ್ಲಿ 15 ವಿಭಿನ್ನ ಸೆಟ್, ಮೈಸೂರಿನಲ್ಲಿ 4 ತರಹದ ಸೆಟ್ ಗಳನ್ನು ಕಲಾ ನಿರ್ದೇಶಕ ಮೋಹನ್ ಬಿ ಕೆರೆ ನಿರ್ಮಾಣ ಮಾಡಿದ್ದಾರೆ.
ಈಗಾಗ್ಲೆ ಶ್ರೀನಿವಾಸ ಕಲ್ಯಾಣ, ಓಲ್ಡ್ ಮಾಂಕ್ ಸೇರಿದಂತೆ ಇನ್ನೂ ಕೆಲ ಸಿನಿಮಾಗಳನ್ನು ನಿರ್ದೇಶನ ಮಾಡಿರುವ ಶ್ರೀನಿಗೆ ಇದು ಐದನೇ ಸಿನಿಮಾ. ಈ ಚಿತ್ರದ ನಿರ್ದೇಶನದ ಜೊತೆಗೆ ಕಥೆ ಚಿತ್ರಕಥೆಯನ್ನು ಬರೆದಿದ್ದಾರೆ.
