• February 10, 2026

ಹಿಜಬ್ ವಿವಾದ ತೀರ್ಪು: ವಿಸ್ತೃತ ಪೀಠಕ್ಕೆ ವರ್ಗಾವಣೆ

ನವದೆಹಲಿಕರಾವಳಿ ಕಾಲೇಜಿನಲ್ಲಿ ಹೊತ್ತಿಕೊಂಡ ಹಿಜಾಬ್ ವಿವಾದ ಕುರಿತು ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ. ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಉಡುಪಿ ವಿದ್ಯಾರ್ಥಿನಿಯರು ಸಲ್ಲಿಸಿದ್ದ ಮೇಲ್ಮನವಿಯನ್ನು ನ್ಯಾಯಮೂರ್ತಿಹೇಮಂತ್ ಗುಪ್ತಾ ವಜಾಗೊಳಿಸಿದ್ದಾರೆ. ಕರ್ನಾಟಕ ಹೈಕೋರ್ಟ್ ನೀಡಿದ ತೀರ್ಪನ್ನು ರದ್ದು ಗೊಳಿಸಿರುವ ನ್ಯಾಯಮೂರ್ತಿ ಸುಧಾಂಶ ಧುಲಿಯಾ ಪ್ರಕಣವನ್ನು ವಿಸ್ತೃತ ಪೀಠಕ್ಕೆ ವರ್ಗಾವಣೆಗೊಳಿಸಿದ್ದಾರೆ. ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಗಳು ವಿಸ್ತ್ರೃತ ಪೀಠ ರಚನೆ ಮಾಡಿ ಮತ್ತೆ ವಿಚಾರಣೆ ನಡೆಸಲಿದ್ದಾರೆ. ಅಲ್ಲಿಯವರೆಗೂ ಕರ್ನಾಟಕ ಹೈಕೋರ್ಟ್ ತೀರ್ಪಿನ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಆದೇಶ ಹೊರಡಿಸಿದ್ದಾರೆ. ರಾಜ್ಯ ಸರ್ಕಾರ ಶಾಲಾ- ಕಾಲೇಜುಗಳಲ್ಲಿ ಹಿಜಾಬ್ ಮೇಲೆ ನಿಷೇಧ ಹೇರಿದ್ದು, ನಿಷೇಧವನ್ನು ತೆಗೆದುಹಾಕಲು ನಿರಾಕರಿಸಿದ ಕರ್ನಾಟಕ ಹೈಕೋರ್ಟ್ ತೀರ್ಪಿನ ವಿರುದ್ಧ ಹಲವಾರು ಅರ್ಜಿಗಳನ್ನು ಸುಪ್ರೀಂ ಕೋರ್ಟ್ ನಲ್ಲಿ ಸಲ್ಲಿಸಲಾಗಿತ್ತು. ಅರ್ಜಿಗಳ ವಿಚಾರನೆ ನಡೆಸಿದ್ದ ನ್ಯಾಯಪೀಠ ತೀರ್ಪನ್ನು ಕಾಯ್ದಿರಿಸಿತ್ತು. ಪೀಠದ ನೇತೃತ್ವದ ನ್ಯಾಯಮೂರ್ತಿ ಹೇಮಂತ್ ಗುಪ್ತಾ ಅವರು ಭಾನುವಾರ ನಿವೃತ್ತರಾಗಲಿರುವ ಕಾರಣ ಈ ವಾರ ಈ ಅರ್ಜಿಗಳ ತೀರ್ಪು ನಿರೀಕ್ಷಿಸಲಾಗಿತ್ತು. ಹತ್ತು ದಿನಗಳ ಕಾಲ ಸುದೀರ್ಘ ವಾದಗಳನ್ನು  ಆಲಿಸಿದ ನಂತರ ಸೆಪ್ಟೆಂಬರ್ 22ರಂದು ಹಿಜಾಬ್ ಮೇಲಿನ ನಿಷೇಧವನ್ನು ತೆಗೆದುಹಾಕಲು ನಿರಾಕರಿಸಿದ ಕರ್ನಾಟಕ ಹೈಕೋರ್ಟ್ ತೀರ್ಪಿನ ವಿರುದ್ಧದ ಅರ್ಜಿಗಳ ತೀರ್ಪನ್ನು ಮೂರು ವಾರಗಳ ಹಿಂದೆಯೇ ಕಾಯ್ದಿರಿಸಿತ್ತು. ಇಂದು ತೀರ್ಪು ಪ್ರಕಟವಾಗಿದೆ. ಪೀಠದ ನೇತೃತ್ವದ ನ್ಯಾಯಮೂರ್ತಿ ಹೇಮಂತ್ ಗುಪ್ತಾ ಅವರು ಭಾನುವಾರ ನಿವೃತ್ತರಾಗಲಿದ್ದಾರೆ.

karnatakaspecial.in

https://karnatakaspecial.in/

Related post

Phone icon
Call Now
Reach us!
WhatsApp icon
Chat Now