• March 20, 2026

ಗಂಧದ ಗುಡಿ ಚಿತ್ರಕ್ಕೆ ಟ್ಯಾಕ್ಸ್ ಫ್ರೀ ಮಾಡುವಂತೆ ಸರ್ಕಾರಕ್ಕೆ ಅಪ್ಪು ಅಭಿಮಾನಿಗಳ ಮನವಿ

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಟನೆಯ ಕೊನೆಯ ಹಾಗೂ ಕನಸಿನ ಸಿನಿಮಾ ಗಂಧದ ಗುಡಿ ಬಿಡುಗಡೆಗೆ ಇನ್ನೂ ಕೆಲವೇ ದಿನಗಳು ಮಾತ್ರವೇ ಭಾಕಿ ಇದೆ. ಇದಕ್ಕೂ ಮುನ್ನ ದೊಡ್ಮನೆ ಕುಟುಂಬ ಅದ್ದೂರಿಯಾಗಿ ಪ್ರೀರಿಲೀಸ್ ರುಕಾರ್ಯಕ್ರಮ ಹಮ್ಮಿಕೊಂಡಿದೆ. ಕರುನಾಡಿನ ನಾಡು, ನುಡು ವಿಚಾರದ ಕುರಿತು ರೆಡಿಯಾಗಿರುವ ಗಂಧದ ಗುಡಿ ಚಿತ್ರವನ್ನು ಟ್ಯಾಕ್ಸ್ ಫ್ರೀ ಮಾಡುವಂತೆ ಅಭಿಮಾನಿಗಳು ಒತ್ತಾಯ ಮಾಡುತ್ತಿದ್ದಾರೆ. ಇದೇ ಅಕ್ಟೋಬ್ 28ರಂದು ಚಿತ್ರಮಂದಿರಗಳಲ್ಲಿ ಗಂಧದ ಗುಡಿ ಸಾಕ್ಷ್ಯ ಚಿತ್ರ ಬಿಡುಗಡೆ ಆಗುತ್ತಿದೆ. ಈಗಾಗ್ಲೆ ಟ್ರೈಲರ್ ನೋಡಿ ಕೋಟ್ಯಾಂತರ ಮಂದಿ ಮೆಚ್ಚುಗೆ ಸೂಚಿಸಿದ್ದಾರೆ. ಅಲ್ಲದೆ ಪುನೀತ್ ಕೆಲವನ್ನು ಸ್ವತಃ ಪ್ರಧಾನಿ ಮೋದಿ ಮೆಚ್ಚಿಕೊಂಡಿದ್ದಾರೆ. ಗಂಧದ ಗುಡಿ ಅಪ್ಪು ನಟನೆಯ ಕೊನೆಯ ಸಿನಿಮಾ ಆಗಿರುವ ಕಾರಣಕ್ಕೆ ಚಿತ್ರದ ಮೇಲೆ ಸಾಕಷ್ಟು ಕ್ರೇಜ್ ಕ್ರಿಯೇಟ್ ಆಗಿದೆ. ಈಗಾಗ್ಲೆ ಅಭಿಮಾನಿಗಳು ಚಿತ್ರದ ಬಿಡುಗಡೆಯ ಸೆಲೆಬ್ರೇಷನ್ ಮಾಡುತ್ತಿದ್ದಾರೆ. ಅಲ್ಲದೆ ಅಂದು ಸಾಕಷ್ಟು ಸಾಮಾಜಿಕ ಕೆಲಸಗಳನ್ನು ಮಾಡಲು ಪವರ್ ಸ್ಟಾರ್ ಅಭಿಮಾನಿಗಳು ಮುಂದಾಗಿದ್ದಾರೆ. ಈ ಮಧ್ಯೆ ಸರ್ಕಾರಕ್ಕೆ ಅಪ್ಪು ಅಭಿಮಾನಿಗಳು ಮನವಿವೊಂದನ್ನು ಸಲ್ಲಿಸಲು ತಯಾರಿ ನಡೆಸಿದ್ದಾರೆ. ಗಂಧದ ಗುಡಿ ಸಾಕ್ಷ್ಯ ಚಿತ್ರ ಅರಣ್ಯ ಸಂಪತ್ತು, ಪ್ರಾಣಿ ಪಕ್ಷಿ ಸಂಕುಲ ಉಳಿಸುವ ನಿಟ್ಟಿನ ಮೇಲೆ ಬೆಳಕು ಚೆಲ್ಲಿದೆ. ಹೀಗಾಗಿ ಚಿತ್ರಕ್ಕೆ ಸರ್ಕಾರ ಯಾವುದೇ ತೆರಿಗೆ ವಿಧಿಸದೇ ವಿನಾಯಿತಿ ನೀಡುವಂತೆ ಅಭಿಮಾನಿಗಳು ಸರ್ಕಾರಕ್ಕೆ ಮನವಿ ಮಾಡುತ್ತಿದ್ದಾರೆ. ಈ ಹಿಂದೆ ಬಿಡುಗಡೆಯಾದ ದಿ ಕಾಶ್ಮೀರ್ ಫೈಲ್ಸ್ ಚಿತ್ರಕ್ಕೆ ತೆರಿಗೆ ವಿನಾಯಿತಿ ನೀಡಲಾಗಿತ್ತು. ಇದೀಗ ನಮ್ಮದೇ ಭಾಷೆಯ ಚಿತ್ರವಾಗಿರೋ ಅಪ್ಪು ನಟನೆಯ ಗಂಧದ ಗುಡಿಗೆ ಟ್ರ್ಯಾಕ್ಸ್ ಪ್ರೀ ಮಾಡಿ ಎಂದು ಅಭಿಮಾನಿಗಳು ಮನವಿ ಮಾಡಿಕೊಳ್ಳಲು ಮುಂದಾಗಿದ್ದಾರೆ. ಈಗಾಗ್ಲೆ ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಅಭಿಯಾನ ಕತೆ ಶುರುವಾಗಿದೆ. ನಟ, ನಟಿಯರು ಕೂಡ ಈ ಕ್ಯಾಂಪೇನ್ ನಲ್ಲಿ ಭಾಗಿಯಾಗಲಿದ್ದು ಈ ಮೂಲಕ ಸರ್ಕಾರಕ್ಕೆ ಮನವಿ ಮಾಡಿಕೊಳ್ಳಲಿದ್ದಾರೆ.

karnatakaspecial.in

https://karnatakaspecial.in/

Related post

Phone icon
Call Now
Reach us!
WhatsApp icon
Chat Now