• January 1, 2026

ಕೇಂದ್ರ ಸಚಿವ ಅನುರಾಗ್ ಠಾಕೂರ್ ಭೇಟಿ ಮಾಡಿದ ನಿರ್ಮಾಪಕ ವಿಜಯ್ ಕಿರಗಂದೂರು

ಕೆಜಿಎಫ್ ಸಿನಿಮಾದ ಮೂಲಕ ದೇಶ, ವಿದೇಶದಲ್ಲೂ ಸದ್ದು ಮಾಡಿದ್ದ ಹೊಂಬಾಳೆ ಫಿಲ್ಮ್ಸ್ ಮಾಲಿಕ ವಿಜಯ್ ಕಿರಗಂದೂರು ಇದೀಗ ಕಾಂತಾರದ ಮೂಲಕ ಕಮಾಲ್ ಮಾಡುತ್ತಿದ್ದಾರೆ. ಕನ್ನಡದ ಜೊತೆಗೆ ಪರಭಾಷೆಯಲ್ಲೂ ಮಿಂಚುತ್ತಿರುವ ಕಾಂತಾರ ತುಳು ನಾಡಿನ ಭೂತ ಕೋಲದ ಕುರಿತಾದ ಸಿನಿಮಾವಾಗಿದೆ. ಸಿನಿಮಾದ ಸಕ್ಸಸ್ ಖುಷಿಯಲ್ಲಿರುವ ನಿರ್ಮಾಪಕ ವಿಜಯ್ ಕಿರಗಂದೂರು ಇದೀಗ ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವ ಅನುರಾಗ್ ಠಾಕೂರ್ ಅವರನ್ನು ಭೇಟಿ ಮಾಡಿದ್ದಾರೆ. ಅನುರಾಗ್ ಠಾಕೂರ್ ಭೇಟಿಯ ಫೋಟೋಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿರುವ ವಿಜಯ್ ಕಿರಗಂದೂರು ಅದೊಂದು ಅತ್ಯುತ್ತಮವಾದ ಭೇಟಿ ಆಗಿತ್ತು ಎಂದು ಬರೆದುಕೊಂಡಿದ್ದಾರೆ. ‘ಅನುರಾಗ್ ಠಾಕೂರ್ ಜೊತೆ ಭಾರತೀಯ ಸಿನಿಮಾ ರಂಗದ ಕುರಿತು ಚರ್ಚಿಸಲಾಯಿತು. ನಮ್ಮ ನೆಲದ ಸಂಸ್ಕೃತಿಯನ್ನು ಬಿಂಬಿಸುವಂತಹ, ಅದನ್ನು ಮುಂದುವರೆಸಿಕೊಂಡು ಹೋಗುವ ಸಾಧ್ಯತೆಯ ಕುರಿತಾಗಿ ಮಾತನಾಡಲಾಯಿತು. ಭಾರತೀಯ ಸಿನಿಮಾ ರಂಗದ ಕುರಿತಾದ ಸೂಕ್ಷ್ಮ ಒಳನೋಟ ಈ ವಿಷಯದಲ್ಲಿ ಇತ್ತು’ ಎಂದು ವಿಜಯ್ ಕಿರಗಂದೂರು ಬರೆದುಕೊಂಡಿದ್ದಾರೆ. ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಟನೆಯ ನಿನ್ನಿಂದಲೆ ಸಿನಿಮಾದ ಮೂಲಕ ಚಿತ್ರ ನಿರ್ಮಾಣ ಸಂಸ್ಥೆ ಹುಟ್ಟುಹಾಕಿದ ವಿಜಯ್ ಕಿರಗಂದೂರು ಇಂದು ಪವಭಾಷೆಯ ಬಿಗ್ ಬಜೆಟ್ ಸಿನಿಮಾಗಳಿಗೂ ಬಂಡವಾಳ ಹೂಡುತ್ತಿದ್ದಾರೆ. ಬ್ಯಾಕ್ ಟು ಬ್ಯಾಕ್ ಹಿಟ್ ಸಿನಿಮಾಗಳನ್ನು ನೀಡಿರುತ್ತಿರುವ ಹೊಂಬಾಳೆ ಫಿಲ್ಸ್ಮ್ ಇದೀಗ ಕಾಂತಾರದ ಮೂಲಕ ಕಮಾಲ್ ಮಾಡುತ್ತಿದೆ.

karnatakaspecial.in

https://karnatakaspecial.in/

Related post

Phone icon
Call Now
Reach us!
WhatsApp icon
Chat Now