• March 14, 2026

ಚಿಕಿತ್ಸೆ ಫಲಕಾರಿಯಾಗದೆ ಕನ್ನಡದ ಹಿರಿಯ ನಟ ಲೋಹಿತಾಶ್ವ ನಿಧನ

ಸ್ಯಾಂಡಲ್ ವುಡ್ ನ ಹಿರಿಯ ನಟ ಲೋಹಿತಾಶ್ವ ನಿಧನರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಲೋಹಿತಾಶ್ವ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಲೋಹಿತಾಶ್ವ ನಟ ಶರತ್ ಲೋಹಿತಾಶ್ವ ಅವರ ತಂದೆ. ಸುಸ್ತು, ವಾಂತಿ-ಭೇದಿ, ಚಳಿ, ಕೆಮ್ಮು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅಕ್ಟೋಬರ್ 4ರಂದು ರಂದು ಬೆಂಗಳೂರಿನ ಅಪೋಲೋ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಚಿಕಿತ್ಸೆ ಸಂದರ್ಭದಲ್ಲಿ ಅವರ ಪರಿಸ್ಥಿತಿ ಇನ್ನಷ್ಟು ಬಿಗಡಾಯಿಸಿತು. ಆದರೆ ಇದೀಗ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಲೋಹಿತಾಶ್ವ ಅವರಿಗೆ ೮೦ ವರ್ಷ ವಯಸ್ಸಾಗಿತ್ತು. ಆಸ್ಪತ್ರೆಗೆ ದಾಖಲಾದ ವೇಳೆ ಲೋಹಿತಾಶ್ವ ಅವರಿಗೆ ಹೃದಯ ಸಂಬಂಧಿ ಸಮಸ್ಯೆ ಇರುವುದು ತಿಳಿದಿದೆ. ಅಲ್ಲದೆ ಅಕ್ಟೋಬರ್ 7ರಂದು ಆಸ್ಪತ್ರೆಯಲ್ಲಿದ್ದ ವೇಳೆಯೇ ಹೃದಯಾಘಾತವಾಗಿತ್ತು. ಕಳೆದ ಕೆಲ ದಿನಗಳಿಂದ ವೆಂಟಿಲೇಟರ್ ನಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದ ಲೋಹಿತಾಶ್ವ ಅವರು ಇಂದು ನಿಧನರಾಗಿದ್ದಾರೆ. ಲೋಹಿತಾಶ್ ಡಾ.ರಾಜ್ ಕುಮಾರ್ ನಟನೆಯ ಸಾಕಷ್ಟು ಸಿನಿಮಾಗಳಲ್ಲಿ ನಟಿಸಿದ್ದರು. ತಮ್ಮ ಗಂಭೀರ ನಟನೆಯಿಂದಲೇ ಸಿನಿಮಾ ರಂಗದಲ್ಲಿ ಗುರುತಿಸಿಕೊಂಡಿದ್ದ ಲೋಹಿತಾಶ್ವ ಅವರ ನಿಧನಕ್ಕೆ ಸ್ಯಾಂಡಲ್ ವುಡ್ ಸಿನಿಮಾ ರಂಗ ಕಂಬನಿ ಮಿಡಿದಿದೆ.

karnatakaspecial.in

https://karnatakaspecial.in/

Related post

Phone icon
Call Now
Reach us!
WhatsApp icon
Chat Now