ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ರಿವೀಲ್ ಆಯ್ತು ಶಶಾಂಕ್, ಡಾರ್ಲಿಂಗ್ ಕೃಷ್ಣ ಕಾಂಬಿನೇಷನ್ ನ ಚಿತ್ರದ ಟೈಟಲ್
ಕೆಲ ದಿನಗಳ ಹಿಂದೆ ಅದ್ದೂರಿಯಾಗಿ ಸಿನಿಮಾದ ಮುಹೂರ್ತ ನೆರವೇರಿತ್ತು. ಆದರೆ ಚಿತ್ರದ ಟೈಟಲ್ ಮಾತ್ರ ಬಿಟ್ಟುಕೊಟ್ಟಿರಲಿಲ್ಲ. ಇದೀಗ ಟೈಟಲ್ ರಿವೀಲ್ ಆಗಿದೆ. ಶಶಾಂಕ್ ಹಾಗೂ ಕೃಷ್ಣ ಇಬ್ಬರೂ ಸೇರಿ ವಿಶಿಷ್ಠವಾಗಿ ಟೈಟಲ್ ರಿವೀಲ್ ಮಾಡಿದ್ದಾರೆ. ಅಂದ್ಹಾಗೆ ಇವರಿಬ್ಬರ ಮೊದಲ ಕಾಂಬಿನೇಷನ್ ಸಿನಿಮಾದ ಟೈಟಲ್ ‘ಕೌಸಲ್ಯಾ ಸುಪ್ರಜಾ ರಾಮ’.
ಶಶಾಂಕ್ ಹಾಗೂ ಡಾರ್ಲಿಂಗ್ ಕೃಷ್ಣ ಕಾಂಬಿನೇಷನ್‌ನನ್ನು ಬಿಸಿ ಪಾಟೀಲ್ ಹಾಗೂ ಶಶಾಂಕ್ ಇಬ್ಬರೂ ಸೇರಿ ನಿರ್ಮಾಣ ಮಾಡುತ್ತಿದ್ದಾರೆ. ಕೃಷಿ ಸಚಿವ ಬಿಸಿ ಪಾಟೀಲ್ ಅವರ ಕೌರವ ಪ್ರೊಡಕ್ಷನ್ ಹಾಗೂ ಶಶಾಂಕ್ ಸಿನಿಮಾಸ್ ಜಂಟಿಯಾಗಿ ನಿರ್ಮಾಣ ಮಾಡಲಿದೆ. ಅರ್ಜುನ್ ಜನ್ಯ ಸಂಗೀತ ನೀಡುತ್ತಿದ್ದಾರೆ.
