• January 2, 2026

ಡಾಲಿ ಧನಂಜಯ್ ಸಿನಿಮಾದಲ್ಲಿ ತಮಿಳು ನಟಿ ಪ್ರಿಯಾ ಭವಾನಿ ಶಂಕರ್ ನಟನೆ

ನಟ ಡಾಲಿ ಧನಂಜಯ್ ಬ್ಯಾಕ್ ಟು ಬ್ಯಾಕ್ ಸಿನಿಮಾಗಳಿಗೆ ಬಣ್ಣ ಹಚ್ಚುತ್ತಿದ್ದಾರೆ. ಇತ್ತೀಚೆಗಷ್ಟೇ ಡಾಲಿ ನಟನೆಯ ಮಾನ್ಸೂನ್ ರಾಗ ಸಿನಿಮಾ ತೆರೆಕಂಡಿದ್ದು ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಇದೀಗ ಡಾಲಿ ಧನಂಜಯ್ ಹಾಗೂ ಸತ್ಯ ದೇವ ನಟನೆಯ ಸಿನಿಮಾ ಸಾಕಷ್ಟು ನಿರೀಕ್ಷೆ ಹುಟ್ಟುಹಾಕಿದೆ. ಇದೀಗ ಸಿನಿಮಾ ತಂಡದ ಕಡೆಯಿಂದ ಹೊಸ ಅಪ್ ಡೇಟ್ ಸಿಕ್ಕಿದೆ. ಧನಂಜಯ್ ಹಾಗೂ ಸತ್ಯ ದೇವ್ ನಟನೆಯ 26ನೇ ಸಿನಿಮಾ ಸಾಕಷ್ಟು ಕುತೂಹಲ ಮೂಡಿಸಿದೆ. ಕನ್ನಡ ಹಾಗೂ ತೆಲುಗು ಭಾಷೆಯಲ್ಲಿ ಸಿನಿಮಾ ತಯಾರಾಗುತ್ತಿದ್ದು ಸದ್ಯದಲ್ಲೇ ಸಿನಿಮಾದ ಟೈಟಲ್ ರಿವೀಲ್ ಆಗಲಿದೆ. ಇದೀಗ ಚಿತ್ರತಂಡಕ್ಕೆ ತಮಿಳು ನಟಿ ಪ್ರಿಯಾ ಭವಾನಿ ಶಂಕರ್ ಎಂಟ್ರಿಕೊಟ್ಟಿದ್ದಾರೆ. ಈಗಾಗ್ಲೆ ಪ್ರಿಯಾ ಭವಾನಿ ಶಂಕರ್ ತಮಿಳು ಚಿತ್ರರಂಗದಲ್ಲಿ ಸಾಕಷ್ಟು ಹೆಸರು ಮಾಡಿದ್ದಾರೆ. ಓಹ್ ಮನಪೆಣ್ಣೆ’, ‘ಬ್ಲಡ್ ಮನಿ’, ‘ತಿರುಚಿತ್ರಬಾಲಂ’ ಸಿನಿಮಾಗಳ ಮೂಲಕ ಖ್ಯಾತಿ ಗಳಿಸಿರುವ ಪ್ರಿಯಾ ಭವಾನಿ ಶಂಕರ್  ಗೆ ಇದು ಮೊದಲು ತೆಲುಗು ಸಿನಿಮಾ. ಚಿತ್ರದಲ್ಲಿ ಪ್ರಿಯಾ ಭವಾನಿ ಫ್ಯಾಶನ್ ಡಿಸೈನರ್ ಪಾತ್ರದಲ್ಲಿ ಕಾಣಿಸಿಕೊಳ್ತಿದ್ದು, ಚಿತ್ರದ ಮತ್ತೊಬ್ಬ ನಟಿಯನ್ನು ಸದ್ಯದಲ್ಲೇ ಚಿತ್ರತಂಡ ಪರಿಚಯಿಸಲಿದೆ. ಡಾಲಿ ಧನಂಜಯ್ ಹಾಗೂ ಸತ್ಯದೇವ್ ಇಬ್ಬರಿಗೂ ಇದು 26ನೇ ಸಿನಿಮಾ. ಕ್ರೈಮ್ ಆಕ್ಷನ್ ಎಂಟಟೈನರ್ ಕಥಾಹಂದರ ಒಳಗೊಂಡಿರುವ ಈ ಚಿತ್ರಕ್ಕೆ ಈಶ್ವರ್ ಕಾರ್ತಿಕ್ ನಿರ್ದೇಶನ ಮಾಡ್ತಿದ್ದಾರೆ. ತೆಲುಗಿನಲ್ಲಿ ಈಶ್ವರ್ ಪೆಂಗ್ವಿನ್ ಸಿನಿಮಾಗೆ ಆಕ್ಷನ್ ಕಟ್ ಹೇಳಿದ್ದಾರೆ.

karnatakaspecial.in

https://karnatakaspecial.in/

Related post

Phone icon
Call Now
Reach us!
WhatsApp icon
Chat Now