• January 1, 2026

ಹಸೆಮಣೆ ಏರಲು ಸಜ್ಜಾದ ಬಹುಭಾಷಾ ನಟಿ ಹನ್ಸಿಕಾ ಮೋಟ್ವಾನಿ

ಬಹುಭಾಷಾ ನಟಿ ಹನ್ಸಿಕಾ ಮೋಟ್ವಾನಿ ಹಸೆಮಣೆ ಏರಲು ಸಜ್ಜಾಗಿದ್ದಾರೆ. ದಕ್ಷಿಣ ಭಾರತದ ರಾಜಕೀಯ ನಾಯಕರೊಬ್ಬರ ಮಗನನ್ನು ವರಿಸಲು ಹನ್ಸಿಕಾ ರೆಡಿಯಾಗಿದ್ದು ಅದಕ್ಕಾಗಿ ತೆರೆ ಮರೆಯಲ್ಲಿ ಭರ್ಜರಿ ತಯಾರಿ ನಡೆಯುತ್ತಿದೆ. ಬಾಲನಟಿಯಾಗಿ ಚಿತ್ರರಂಗಕ್ಕೆ ಎಂಟ್ರಿಕೊಟ್ಟ ಹನ್ಸಿಕಾ ಬಳಿಕ ಬಹುಭಾಷ ನಟಿಯಾಗಿ ಖ್ಯಾತಿ ಘಳಿಸಿದ್ದಾರೆ. ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಟನೆಯ ಬಿಂದಾಸ್ ಸಿನಿಮಾದಲ್ಲಿ ನಟಿಸಿ ಕನ್ನಡಿಗರ ಮನಸ್ಸನ್ನು ಗೆದ್ದಿದ್ದರು. ಸದ್ಯ ಇದೀಗ ಹನ್ಸಿಕಾ ಗೃಹಸ್ಥಾಶ್ರಮಕ್ಕೆ ಕಾಲಿಡಲು ನಿರ್ಧರಿಸಿದ್ದು ಈ ಮೂಲಕ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ. ತಮಿಳು, ತೆಲುಗು, ಕನ್ನಡ ಸಿನಿಮಾಗಳ ಮೂಲಕ ಸಾಕಷ್ಟು ಹೆಸರು ಮಾಡಿರುವ ಹನ್ಸಿಕಾ ಕೈಯಲ್ಲಿ ಸದ್ಯ ಸಾಕಷ್ಟು ಸಿನಿಮಾಗಳಿವೆ. ಕೈತುಂಬಾ ಸಿನಿಮಾಗಳನ್ನು ಇಟ್ಟುಕೊಂಡಿರುವ ಹನ್ಸಿಕಾ ಯಶಸ್ಸಿನ ಉತ್ತುಂಗದಲ್ಲಿರುವಾಗ್ಲೆ ಹಸೆಮಣೆ ಏರಲು ನಿರ್ಧರಿಸಿದ್ದಾರೆ. ಈಗಾಗಲೇ ಕುಟುಂಬಸ್ಥರ ಸಮ್ಮುಖದಲ್ಲಿ ನಿಶ್ಚಿತಾರ್ಥ ನಡೆದಿದ್ದು, ಡಿಸೆಂಬರ್‌ನಲ್ಲಿ ಈ ಜೋಡಿ ಹಸೆಮಣೆ ಏರಲಿದ್ದಾರೆ.  450 ವರ್ಷದ ಹಳೆಯ ಜೈಪುರದ ಪ್ಯಾಲೇಸ್‌ನಲ್ಲಿಡೆಸ್ಟಿನೇಷನ್ ವೆಡ್ಡಿಂಗ್‌ಗೆ ಪ್ಲ್ಯಾನ್ ಮಾಡಲಾಗಿದೆ. ಇದಕ್ಕಾಗಿ ಭರ್ಜರಿಯಾಗಿ ನಡೆಯುತ್ತಿದ್ದು ಇದೇ ವರ್ಷದ ಕೊನೆಯಲ್ಲಿ ಹನ್ಸಿಕಾ ಹಸೆಮಣೆ ಏರಲಿದ್ದಾರೆ.

karnatakaspecial.in

https://karnatakaspecial.in/

Related post

Phone icon
Call Now
Reach us!
WhatsApp icon
Chat Now