ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
‘ಗಂಧದ ಗುಡಿ’ಗಾಗಿ ಇದೇ ಮೊದಲ ಬಾರಿಗೆ ಧ್ವನಿ ನೀಡಿದ ಅಶ್ವಿನಿ ಪುನೀತ್ ರಾಜ್ ಕುಮಾರ್
ಇದೀಗ ಗಂಧದ ಗುಡಿ ವಿಚಾರವಾಗಿ ಪುನೀತ್ ಅಭಿಮಾನಿಗಳಿಗೆ ಮತ್ತೊಂದು ಸಿಹಿ ಸುದ್ದಿಯನ್ನು ಅಶ್ವಿನಿ ಪುನೀತ್ ರಾಜ್ ಕುಮಾರ್ ನೀಡಿದ್ದಾರೆ. ಇದೇ ಮೊದಲ ಬಾರಿಗೆ ಗಂಧದ ಗುಡಿ ಡಾಕ್ಯೂಮೆಂಟ್ರಿಗೆ ಅಶ್ವೀನಿ ಪುನೀತ್ ರಾಜ್ ಕುಮಾರ್ ಹಿನ್ನೆಲೆ ಧ್ವನಿ ನೀಡಿದ್ದಾರೆ. ಗಂಧದ ಗುಡಿಯ ಆಶಯವನ್ನು ಸ್ವತಃ ಅಶ್ವಿನಿ ಪುನೀತ್ ರಾಜ್‌ಕುಮಾರ್ ಅವರೇ ಹೇಳಿದ್ದಾರೆ.
ಪುನೀತ್ ಪರ್ವ ಕಾರ್ಯಕ್ರಮ ಅಕ್ಟೋಬರ್ 21ರ ಶುಕ್ರವಾರದಂದು ಸಂಜೆ 6 ಗಂಟೆಗೆ ಆರಂಭಗೊಳ್ಳಲಿದೆ. ಕಾರ್ಯಕ್ರಮ ಬೆಂಗಳೂರಿನ ಅರಮನೆ ಮೈದಾನದ ಕೃಷ್ಣ ವಿಹಾರದಲ್ಲಿ ನಡೆಯಲಿದೆ. ಅಂದು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವವರು ಬಿಳಿ ಬಣ್ಣದ ವಸ್ತ್ರ ಧರಿಸಿ ಆಗಮಿಸುವಂತೆ ಅಶ್ವೀನಿ ಪುನೀತ್ ರಾಜ್ ಕುಮಾರ್ ಮನವಿ ಮಾಡಿದ್ದಾರೆ.
