• January 1, 2026

ಕನ್ನಡ, ತಮಿಳಿನ ಬಳಿಕ ತೆಲುಗು ಚಿತ್ರರಂಗಕ್ಕೆ ಆಶಿಕಾ ರಂಗನಾಥ್ ಎಂಟ್ರಿ

2016ರಲ್ಲಿ ತೆರೆಕಂಡ ಕ್ರೇಜಿಬಾಯ್ ಸಿನಿಮಾದ ಮೂಲಕ ಸ್ಯಾಂಡಲ್ ವುಡ್ ಗೆ ಎಂಟ್ರಿಕೊಟ್ಟ ನಟಿ ಆಶಿಕಾ ರಂಗನಾಥ್ ಸದ್ಯ ಸ್ಟಾರ್ ನಟಿಯಾಗಿ ಖ್ಯಾತಿ ಘಳಿಸಿದ್ದಾರೆ. ಒಂದರ ಹಿಂದೊಂದರಂತೆ ಸಿನಿಮಾಗಳಲ್ಲಿ ಬ್ಯುಸಿಯಾಗಿರುವ ಆಶಿಕಾ ಇದೀಗ ಟಾಲಿವುಡ್ ಚಿತ್ರರಂಗಕ್ಕೆ ಎಂಟ್ರಿಕೊಟ್ಟಿದ್ದಾರೆ. ಶಿವರಾಜ್ ಕುಮಾರ್, ಗಣೇಶ್, ಶ್ರೀಮುರುಳಿ, ಶರಣ್, ಅಜಯ್ ರಾವ್ ಸೇರಿದಂತೆ ಸಾಕಷ್ಟು ಸ್ಟಾರ್ ನಟರ ಜೊತೆ ಸ್ಕ್ರೀನ್ ಶೇರ್ ಮಾಡಿರುವ ಆಶಿಕಾ ಈಗಾಗ್ಲೆ ತಮಿಳು ಚಿತ್ರರಂಗಕ್ಕೆ ಎಂಟ್ರಿಕೊಟ್ಟಿದ್ದಾರೆ. ತಮಿಳು ನಟ ಸಿದ್ದಾರ್ಥ್ ನಟನೆಯ ಮುಂದಿನ ಸಿನಿಮಾಗೆ ನಾಯಕಿಯಾಗುವ ಮೂಲಕ ಕಾಲಿವುಡ್ ಗೆ ಎಂಟ್ರಿಕೊಟ್ಟಿದ್ದಾರೆ.   ತಮಿಳಿನ ಬಳಿಕ ಇದೀಗ ತೆಲುಗಿಗೆ ಪಟಾಕಿ ಪೋರಿ ಕಾಲಿಟ್ಟಿದ್ದಾರೆ. ತೆಲುಗು ನಟ ನಂದಮೂರಿ ಕಲ್ಯಾಣ್ ರಾಮ್ ಜೊತೆ ಡ್ಯೂಯೆಟ್ ಹಾಡಿದ್ದಾರೆ. ತೆಲುಗಿನ ಖ್ಯಾತ ನಿರ್ಮಾಣ ಸಂಸ್ಥೆಯಾದ ಮೂವೀ ಮೇಕರ್ಸ್ ಬ್ಯಾನರ್ ಅಡಿಯಲ್ಲಿ ಸಿನಿಮಾ ಮೂಡಿ ಬರುತ್ತಿದ್ದು ಈಗಾಗ್ಲೆ ಚಿತ್ರದ ಬಹುತೇಕ ಶೂಟಿಂಗ್ ಕಂಪ್ಲೀಟ್ ಆಗಿದೆ.   ಕಲ್ಯಾಣ್ ರಾಮ್ ಹಾಗೂ ಆಶಿಕಾ ಕಾಂಬಿನೇಷನ್ ನ ಸಿನಿಮಾವನ್ನು ದೊಡ್ಡ ಬಜೆಟ್ ನಲ್ಲಿ ನಿರ್ಮಾಣ ಮಾಡಲಾಗುತ್ತಿದ್ದು ಇನ್ನಷ್ಟೇ ಚಿತ್ರದ ಟೈಟಲ್ ಹೊರ ಬೀಳಬೇಕಿದೆ. ಕನ್ನಡ ತಮಿಳಿನ ಬಳಿಕ ಆಶಿಕಾ ತೆಲುಗು ಚಿತ್ರರಂಗಕ್ಕೆ ಎಂಟ್ರಿಕೊಟ್ಟಿರುವ ಅಭಿಮಾನಿಗಳಿಗೆ ಖುಷಿ ನೀಡಿದೆ. ಅಲ್ಲೂ ಈಕೆ ಸಕ್ಸಸ್ ಕಾಣಲಿ ಎಂದು ಅಭಿಮಾನಿಗಳು ಆಶಿಸುತ್ತಿದ್ದಾರೆ.

karnatakaspecial.in

https://karnatakaspecial.in/

Related post

Phone icon
Call Now
Reach us!
WhatsApp icon
Chat Now