• January 2, 2026

ನ.1ರಂದು ಪುನೀತ್ ರಾಜ್ ಕುಮಾರ್ ಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರಧಾನ: ಬೊಮ್ಮಾಯಿ

ಸಿನಿಮಾಗಳ ಜೊತೆಗೆ ಸಮಾಜಮುಖಿ ಕೆಲಸಗಳಲ್ಲಿ ಗುರುತಿಸಿಕೊಂಡಿದ್ದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಗೆ  ಕರ್ನಾಟಕ ರತ್ನ ಪ್ರಶಸ್ತಿ ಕೊಡುವುದಾಗಿ ಈ ಹಿಂದೆ ಬಸವರಾಜ್ ಬೊಮ್ಮಾಯಿ ಹೇಳಿದ್ದರು. ಇದೀಗ ನವೆಂಬರ್ 1ರಂದು ಪ್ರಶಸ್ತಿ ಪ್ರಧಾನ ಮಾಡುವುದಾಗಿ ಸಿಎಂ ಘೋಷಿಸಿದ್ದಾರೆ. ಪುನೀತ್ ರಾಜ್ ಕುಮಾರ್ ಅಗಲಿ ಅಕ್ಟೋಬರ್ ಅಂತ್ಯಕ್ಕೆ 1 ವರ್ಷವಾಗಲಿದೆ. ಪುನೀತ್ ರಾಜ್ ಕುಮಾರ್ ರ ಸಮಾಜ ಸೇವೆಯನ್ನು ಗುರುತಿಸಿ ಕರ್ನಾಟಕ ರತ್ನ ಪ್ರಶಸ್ತಿ ನೀಡಬೇಕು ಎಂದು ಸಾಕಷ್ಟು ಮಂದಿ ಬೇಡಿಕೆ ಇಟ್ಟಿದ್ದರು. ಬಳಿಕ ಸಿಎಂ ಬೊಮ್ಮಾಯಿ ಪ್ರಶಸ್ತಿ ನೀಡುವುದಾಗಿ ತಿಳಿಸಿದ್ದರು. ಇದೀಗ ನವೆಂಬರ್ 1ರಂದು ವಿಧಾನಸೌಧದಲ್ಲಿ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ನವೆಂಬರ್ 1ರಂದು ಸಂಜೆ 4 ಗಂಟೆಗೆ ವಿಧಾನಸೌಧದ ಮೆಟ್ಟಿಲುಗಳ ಮೇಲೆ ಕಾರ್ಯಕ್ರಮ ನಡೆಯಲಿದೆ. 2019ರ ಬಳಿಕ ಯಾರಿಗೂ `ಕರ್ನಾಟಕ ರತ್ನ ಪ್ರಶಸ್ತಿ’ ಕೊಟ್ಟಿರಲಿಲ್ಲ. ಈಗ 8 ಜನರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡಲಾಗುತ್ತಿದೆ. ಇನ್ನೂ ಪುನೀತ್ ನಟನೆಯ ಕನಸಿನ ಸಿನಿನ ಚಿತ್ರವಾಗಿರೋ ಗಂಧದ ಗುಡಿ ಪ್ರಿರಿಲೀಸ್ ಕಾರ್ಯಕ್ರಮ ಬೆಂಗಳೂರಿ ಅರಮನೆ ಮೈದಾನದಲ್ಲಿ ನಡೆಯಲಿದೆ. ಕಾರ್ಯಕ್ರಮಕ್ಕೆ ಸ್ಯಾಂಡಲ್ ವುಡ್ ಸಿನಿಮಾ ರಂಗದ ಕಲಾವಿದರ ಜೊತೆಗೆ ಪರಭಾಷೆಯ ನಟ, ನಟಿಯರು ಆಗಮಿಸಲಿದ್ದಾರೆ.

karnatakaspecial.in

https://karnatakaspecial.in/

Related post

Phone icon
Call Now
Reach us!
WhatsApp icon
Chat Now