ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಕುಟುಂಬ ಸಮೇತ ಕಾಂತಾರ ಸಿನಿಮಾ ವೀಕ್ಷಿಸಲಿದ್ದಾರೆ ಡಾ.ವೀರೇಂದ್ರ ಹೆಗ್ಗಡೆ
ಸಿನಿಮಾ ನೋಡಿದ ಬಳಿಕೆ ವೀರೇಂದ್ರ ಹೆಗ್ಗಡೆ ಅವರು ಏನು ಪ್ರತಿಕ್ರಿಯೆ ನೀಡುತ್ತಾರೆ ಎಂಬ ಕುತೂಹಲ ಶುರುವಾಗಿದೆ. ನಟ ಚೇತನ್ ಹೇಳಿಕೆಗೆ ಸಾಕಷ್ಟು ವಿರೋಧಗಳು ವ್ಯಕ್ತವಾಗಿದ್ದು ಸಾಕಷ್ಟು ಮಂದಿ ಚೇತನ್ ಹೇಳಿಕೆಯ ಕುರಿತಾಗಿ ಪ್ರತಿಕ್ರಿಯಿಸಿದ್ದಾರೆ. ಇದೀಗ ವೀರೇಂದ್ರ ಹೆಗ್ಗಡೆ ಅವರ ಅಭಿಪ್ರಾಯ ಸಾಕಷ್ಟು ಮುಖ್ಯವಾಗಲಿದೆ.
ಹೊಂಬಾಳೆ ಬ್ಯಾನರ್ ಅಡಿಯಲ್ಲಿ ನಿರ್ಮಾಣವಾದ ಕಾಂತಾರ ಸಿನಿಮಾ ಪರಭಾಷೆಗೂ ಡಬ್ ಆಗಿ ಅಲ್ಲೂ ಸೂಪರ್ ಹಿಟ್ ಆಗಿದೆ. ಈಗಾಗ್ಲೆ ನಟ ಪ್ರಭಾಸ್, ನಟಿ ಅನುಷ್ಕಾ ಶೆಟ್ಟಿ, ಶಿಲ್ಪಾ ಶೆಟ್ಟಿ, ಕಂಗಾನ ರಣಾವತ್ ಸೇರಿದಂತೆ ಸಾಕಷ್ಟು ಮಂದಿ ಸಿನಿಮಾ ವೀಕ್ಷಿಸಿದ್ದು ಚಿತ್ರದ ಬಗ್ಗೆ ಮೆಚ್ಚುಗೆ ಮಾತನಾಡಿದ್ದಾರೆ.
