• January 1, 2026

ದೈವಾರಾಧನೆಯನ್ನು ಹಿಂದೂ ಧರ್ಮಕ್ಕೆ ವಿಮರ್ಶೆ ಮಾಡುವ ಅಗತ್ಯವಿಲ್ಲ: ಡಾ.ಡಿ.ವೀರೇಂದ್ರ ಹೆಗ್ಗಡೆ

ರಿಷಬ್ ಶೆಟ್ಟಿ ನಟನೆಯ ಕಾಂತಾರ ಸಿನಿಮಾವನ್ನು ಧರ್ಮಸ್ಥಳ ಧರ್ಮಾಧಿಕಾರಿ, ರಾಜ್ಯ ಸಭಾ ಸದಸ್ಯ ಡಾ.ಡಿ.ವೀರೇಂದ್ರ ಹೆಗ್ಗಡೆ ಕುಟುಂಬ ಸದಸ್ಯರೊಂದಿಗೆ ಸಿನಿಮಾ ವೀಕ್ಷಿಸಿದ್ದಾರೆ. ಈ ವೇಳೆ ದೈವಗಳು ಅಧರ್ಮಕ್ಕೆ ಬೆಂಬಲ ನೀಡುವುದಿಲ್ಲ ಎನ್ನುವುದು ಈ ಸಿನಿಮಾದ ಸಂದೇಶ ಎಂದು ಧರ್ಮಸ್ಥಳದ ಧರ್ಮಾಧಿಕಾರಿ, ರಾಜ್ಯ ಸಭಾ ಸದಸ್ಯ ಡಾ.ಡಿ.ವೀರೇಂದ್ರ ಹೆಗ್ಗಡೆ ಹೇಳಿದ್ದಾರೆ. ಕಾಂತಾರ ಸಿನಿಮಾಗೆ ಎಲ್ಲೆಡೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ. ಸಿನಿಮಾ ನೋಡಿದ ಪ್ರತಿಯೊಬ್ಬರು ಚಿತ್ರದ ಕುರಿತು ಮೆಚ್ಚುಗೆ ಸೂಚಿಸಿದ್ದಾರೆ. ಸಿನಿಮಾ ಆರಂಭಕ್ಕೂ ಮುನ್ನ ವೀರೇಂದ್ರ ಹೆಗ್ಗಡೆ ಅವರ ಆಶೀರ್ವಾದ ಪಡೆದಿದ್ದರು ನಟ ಕಂ ನಿರ್ದೇಶಕ ರಿಷಬ್ ಶೆಟ್ಟಿ. ಇದೀಗ ಕುಟುಂಬ ಸಮೇತ ಮಂಗಳೂರಿನ  ಭಾರತ್ ಸಿನಿಮಾದಲ್ಲಿ ಡಾ.ಡಿ.ವೀರೇಂದ್ರ ಹೆಗ್ಗಡೆ ಕಾಂತಾರ ಸಿನಿಮಾವನ್ನು ವೀಕ್ಷಿಸಿದ್ದಾರೆ.     ತುಳುನಾಡಿದ ದೈವಾರಾಧನೆಯನ್ನು ಇಡೀ‌ ವಿಶ್ವಕ್ಕೆ ತೋರಿಸಿಕೊಟ್ಟಿರುವ ರಿಷಬ್ ಶೆಟ್ಟಿ ದೈವಾರಾಧನೆಯ ಸೂಕ್ಷ್ಮತೆಯನ್ನು ಬಹಳ ಚೆನ್ನಾಗಿ ಚಿತ್ರಿಸಿದ್ದಾರೆ. ದೈವಗಳು ಅಧರ್ಮಕ್ಕೆ ಬೆಂಬಲ ಕೊಡೋದಿಲ್ಲ ಎನ್ನುವುದು ಈ ಸಿನಿಮಾದ ಸಂದೇಶ. ಸಮಾಜದಲ್ಲಿ ಸ್ವಾರ್ಥಿಗಳು ಇರುತ್ತಾರೆ. ಆದರೆ ನಮ್ಮ‌ ದೈವಗಳು ಯಾವುದಕ್ಕೂ ಬೆಂಬಲ‌ ಕೊಡೋದಿಲ್ಲ ಎನ್ನುವುದನ್ನು  ಈ ಸಿನಿಮಾ‌ ಮತ್ತೆ ತೋರಿಸಿಕೊಟ್ಟಿದೆ. ಇದು ಒಳ್ಳೆಯ ಸಂದೇಶ ಅಂತ ಅನಿಸಿದೆ ಎಂದರು.     ನಮ್ಮ ನಂಬಿಕೆ ಆಚರಣೆಗಳು ಸ್ವಾಭಾವಿಕವಾಗಿ ಬೆಳೆದು ಬಂದದ್ದು ಅದನ್ನು ಬಿಟ್ಟಿರಲು ಸಾಧ್ಯವಿಲ್ಲ. ನಾವೆಲ್ಲ ಇವತ್ತಿಗೂ ದೈವಾರಾಧನೆ ಮಾಡುತ್ತೇವೆ. ದೈವದ ನುಡಿಗೆ ಗೌರವ ಕೊಡುತ್ತೇವೆ. ದೈವ ಮೈಮೇಲೆ‌ ಬಂದಾಗ ಅದಕ್ಕೆ ಗೌರವ ಕೊಡುತ್ತೇವೆ. ಇದನ್ನು ಹಿಂದೂ ಧರ್ಮಕ್ಕೆ‌ ವಿಮರ್ಶೆ ಮಾಡುವ ಅಗತ್ಯ ಇಲ್ಲ ಎಂದು ಹೆಗ್ಗಡೆಯವರು ಅಭಿಪ್ರಾಯಪಟ್ಟಿದ್ದಾರೆ.

karnatakaspecial.in

https://karnatakaspecial.in/

Related post

Phone icon
Call Now
Reach us!
WhatsApp icon
Chat Now