ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಕಾಂತಾರದ ವರಾಹ ರೂಪಂ ಹಾಡು ಕಾಫಿ ರೈಟ್ ಆರೋಪ: ಕೇಸು ದಾಖಲಿಸಲು ಮುಂದಾದ ನವರಸಂ ತಂಡ
ವರಾಹಂ ರೂಪ ಹಾಡನ್ನು ಕಾಫಿ ಮಾಡಲಾಗಿದೆ ಎಂಬ ಆರೋಪ ಕೇಳಿ ಬಂದಿದ್ದು ಇದೀಗ ಮಲಯಾಳಂನ ‘ತೈಕ್ಕುಡಂ ಬ್ರಿಡ್ಜ್’ ತಂಡದವರು ಕೇಸ್ ಹಾಕಲು ನಿರ್ಧರಿಸಿದ್ದಾರೆ. ಇದಕ್ಕೆ ನಿರ್ಮಾಣ ಸಂಸ್ಥೆಯಾದ ಹೊಂಬಾಳೆ ಫಿಲ್ಮ್ಸ್, ಸಂಗೀತ ನಿರ್ದೇಶಕ ಅಜನೀಶ್ ಬಿ. ಲೋಕನಾಥ್ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಯಾವ ರೀತಿಯ ಪ್ರತಿಕ್ರಿಯೆ ನೀಡುತ್ತಾರೆ ಎಂಬ ಕುತೂಹಲ ಮೂಡಿದೆ.
ಈ ಹಿಂದೆ ಹಾಡಿನ ಕುರಿತಾಗಿ ಆರೋಪ ಕೇಳಿ ಬಂದಾಗ ಸಂಗೀತ ನಿರ್ದೇಶಕ ಅಜನೀಶ್ ಲೋಕನಾಥ್, ಇದು ಕಾಪಿ ಅಲ್ಲ, ಕೇವಲ ಸ್ಫೂರ್ತಿ ಪಡೆದು ಮಾಡಿದ್ದು. ರಾಗಗಳು ಒಂದೇ ಆಗಿರುವ ಕಾರಣದಿಂದ ಸಾಮ್ಯತೆ ಸಹಜ’ ಎಂದದ್ದರು. ಸಿನಿಮಾ ಬಿಡುಗಡೆ ಆಗಿ ಹತ್ತಿರ ಹತ್ತಿರ ಒಂದು ತಿಂಗಳಾಗುತ್ತ ಬಂದಿದೆ. ಇಷ್ಟು ದಿನ ಸುಮ್ಮನಿದ್ದ ‘ತೈಕ್ಕುಡಂ ಬ್ರಿಡ್ಜ್’ ತಂಡದವರು ಈಗ ಕೇಸ್ ಹಾಕಲು ನಿರ್ಧರಿಸಿದ್ದಾರೆ.
‘ನಾವು ನಮ್ಮ ಕೇಳುಗರಿಗೆ ತಿಳಿಸುವುದೇನೆಂದರೆ, ಯಾವುದೇ ರೀತಿಯಲ್ಲೂ ‘ತೈಕ್ಕುಡಂ ಬ್ರಿಡ್ಜ್’ ತಂಡವು ‘ಕಾಂತಾರ’ ಸಿನಿಮಾ ಜೊತೆ ಸಹಯೋಗ ಹೊಂದಿಲ್ಲ. ವರಾಹ ರೂಪಂ ಮತ್ತು ನವರಸಂ ಹಾಡುಗಳ ನಡುವೆ ಇರುವ ಸಾಮ್ಯತೆಯು ಕಾಪಿರೈಟ್ ಕಾನೂನಿನ ಸ್ಪಷ್ಟ ಉಲ್ಲಂಘನೆ ಆಗಿದೆ. ಇದಕ್ಕೆ ಕಾರಣವಾದವರ ವಿರುದ್ಧ ನಾವು ಕಾನೂನಿನ ಕ್ರಮಕ್ಕೆ ಒತ್ತಾಯಿಸುತ್ತೇವೆ’ ಎಂದು ‘ತೈಕ್ಕುಡಂ ಬ್ರಿಡ್ಜ್’ ತಂಡ ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದೆ.
