ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ತೆಲುಗು ನಿರ್ದೇಶಕ ಕಾರ್ತಿಕ್ ಅದ್ವೈತ್ ಚಿತ್ರದಲ್ಲಿ ನಟಿಸಲು ಗ್ರೀನ್ ಸಿಗ್ನಲ್ ಕೊಟ್ಟ ಶಿವಣ್ಣ
ಕಾರ್ತಿಕ್ ಅದ್ವೈತ್ ಕಥೆ ಕೇಳಿ ಇಂಪ್ರೆಸ್ ಆದ ಶಿವಣ್ಣ ಚಿತ್ರದಲ್ಲಿ ನಟಿಸಲು ಗ್ರೀನ್ ಸಿಗ್ನಲ್ ನೀಡಿದ್ದಾರೆ. ತಮಿಳಿನಲ್ಲಿ ವಿಕ್ರಂ ಪ್ರಭು ನಟನೆಯ ‘ಪಾಯುಮ್ ಒಲಿ ನೀ ಎನಕ್ಕು’ ಚಿತ್ರ ನಿರ್ದೇಶಿಸಿದ್ದ ಕಾರ್ತಿಕ್ ಅದ್ವೈತ್ ಶಿವಣ್ಣ ಚಿತ್ರದ ಮೂಲಕ ಸ್ಯಾಂಡಲ್ ವುಡ್ ಗೆ ಎಂಟ್ರಿಕೊಡ್ತಿದ್ದಾರೆ.
ಶಿವಣ್ಣ ಹಾಗೂ ಅದ್ವೈತ್ ಕಾಂಬಿನೇಷನ್ ನಲ್ಲಿ ರೆಡಿಯಾಗುತ್ತಿರುವ ಚಿತ್ರ ಆಕ್ಷನ್ ಸಸ್ಪೆನ್ಸ್ ಚಿತ್ರವಾಗಿದ್ದು ಚಿತ್ರದಲ್ಲಿ ಶಿವಣ್ಣ ಡಿಫರೆಂಟ್ ಲುಕ್ ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಸದ್ಯ ಚಿತ್ರತಂಡ ಪ್ರೀಪ್ರೊಡಕ್ಷನ್ ಕೆಲಸದಲ್ಲಿ ತೊಡಗಿಕೊಂಡಿದ್ದು ಮುಂದಿನ ವರ್ಷದ ಆರಂಭದಲ್ಲಿ ಶೂಟಿಂಗ್ ಶುರುಮಾಡಲಿದೆ.
ಶಿವಣ್ಣ ಅಭಿನಯದ ‘ಕಿಲ್ಲಿಂಗ್ ವೀರಪ್ಪನ್’ ಚಿತ್ರಕ್ಕೆ ಕಾರ್ಯಕಾರಿ ನಿರ್ಮಾಪಕರಾಗಿದ್ದ ಹಾಗೂ ತೆಲುಗಿನಲ್ಲಿ ‘ಆಫೀಸರ್’, ‘ಗುಡ್ ಲಕ್ ಸಖಿ’ ಸಿನಿಮಾ ನಿರ್ಮಿಸಿರುವ ನಿರ್ಮಾಪಕ ಸುಧೀರ್ ಚಂದ್ರ ಪಡಿರಿ ‘ಸುಧೀರ್ ಚಂದ್ರ ಫಿಲಂ ಕಂಪನಿ’ ಬ್ಯಾನರ್ ನಡಿ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಇದೊಂದು ಬಿಗ್ ಬಜೆಟ್ ಚಿತ್ರವಾಗಿದ್ದು ಮುಂದಿನ ದಿನಗಳಲ್ಲಿ ಚಿತ್ರದ ಇನ್ನಷ್ಟು ಮಾಹಿತಿಯನ್ನು ಚಿತ್ರತಂಡ ನೀಡಲಿದೆ.
