• March 15, 2026

ಕಾಂತಾರ ವೀಕ್ಷಿಸಿ ರಿಷಬ್ ಶೆಟ್ಟಿಗೆ ಕರೆ ಮಾಡಿ ಸರ್ ಪ್ರೈಸ್ ನೀಡಿದ ರಜನಿಕಾಂತ್

ರಿಷಬ್ ಶೆಟ್ಟಿ ನಿರ್ದೇಶಿಸಿ, ನಟಿಸಿರುವ ಕಾಂತಾರ ಸಿನಿಮಾ ದಿನದಿಂದ ದಿನಕ್ಕೆ ಒಂದಲ್ಲ ಒಂದು ಕಾರಣಕ್ಕೆ ಸುದ್ದಿಯಾಗುತ್ತಲೆ ಇದೆ. ಈಗಾಗ್ಲೆ ಕಾಂತಾರ ನೋಡಿ ಸಾಕಷ್ಟು ಮಂದಿ ಪ್ರತಿಕ್ರಿಯಿಸಿದ್ದ ಸ್ಟಾರ್ ನಟ, ನಟಿಯರೇ ಕಾಂತಾರಕ್ಕೆ ಫಿದಾ ಆಗಿದ್ದಾರೆ. ಇದೀಗ ಚಿತ್ರವನ್ನು ನೋಡಿ ಸೂಪರ್ ಸ್ಟಾರ್ ರಜನಿಕಾಂತ್ ಮೆಚ್ಚುಗೆ ಸೂಚಿಸಿದ್ದಾರೆ. ಕಾಂತಾರ ಚಿತ್ರ ವೀಕ್ಷಿಸಿದ ಬಳಿಕ ರಜನಿಕಾಂತ್, ರಕ್ಷಿತ್ ಶೆಟ್ಟಿಗೆ ಕರೆ ಮಾಡಿ ವಿಶ್ ಮೆಚ್ಚುಗೆ ಸೂಚಿಸಿದ್ದಾರೆ. ಈ ಕುರಿತು ಮಾತಾಡಿದ ರಿಷಬ್ ಶೆಟ್ಟಿ, ರಜನಿ ಕಾಂತ್ ಕರೆ ಮಾಡಿದಾಗ ಥ್ರಿಲ್ ಆಗಿದ್ದ ರಿಷಬ್, ಮಾತಿನ ಮಧ್ಯೆ ರಜನಿ ಸ್ಟೈಲ್ ನಲ್ಲೇ ಸಿಗರೇಟು ತಿರುಗಿಸಿ ಬಾಯಿಗೆ ಹಾಕಿಕೊಂಡ ದೃಶ್ಯವನ್ನು ನೆನಪಿಸಿದ್ದಾರೆ. ಈ ದೃಶ್ಯ ಮಾಡುವಾಗ ನಿಮ್ಮನ್ನೇ ನೆನಪಿಸಿಕೊಂಡು, ನಿಮ್ಮದೇ ಸ್ಟೈಲ್ ನಲ್ಲೇ ಅದನ್ನು ಮಾಡಲು ಪ್ರಯತ್ನಿಸಿದ್ದೇನೆ ಎಂದು ರಿಷಬ್ ರಜನಿಕಾಂತ್ ಬಳಿ ಹೇಳಿದ್ದಾರೆ. ಸಿನಿಮಾ, ಮೇಕಿಂಗ್, ಕಥೆ, ನಟನೆ, ಸಂಗೀತ ಸೇರಿದಂತೆ ಹಲವು ವಿಚಾರಗಳನ್ನು ರಜನಿ ಮುಕ್ತವಾಗಿ ರಿಷಬ್ ಜೊತೆ ಮಾತನಾಡಿದ್ದಾರೆ. ಎಲ್ಲಾ ವಿಭಾಗದ ಕೆಲಸವನ್ನೂ ರಜನಿ ಮೆಚ್ಚಿಕೊಂಡಿದ್ದಾರೆ. ಸೆ.30ರಂದು ತೆರೆಕಂಡ ಕಾಂತಾರ ಬಳಿಕ ಪರಭಾಷೆಯಲ್ಲೂ ಸದ್ದು ಮಾಡುತ್ತಿದೆ. ಈಗಾಗ್ಲೆ ಕಾಂತಾರ ಚಿತ್ರ ವೀಕ್ಷಿಸಿ ನಟಿಯರಾದ ಕಂಗಾನ ರಣಾವತ್, ಪೂಜಾ ಹೆಗ್ಡೆ, ಅನುಷ್ಕಾ ಶೆಟ್ಟಿ, ಶಿಲ್ಪಾ ಶೆಟ್ಟಿ, ನಟ ಪ್ರಭಾಸ್ ಸೇರಿದಂತೆ ಸಾಕಷ್ಟು ಮಂದಿ ಕಾಂತಾರ ನೋಡಿ ಮೆಚ್ಚುಗೆ ಸೂಚಿಸಿದ್ದಾರೆ. ಇದುವರೆಗೂ 180 ಕೋಟಿಗೂ ಅಧಿಕ ಹಣ ಘಳಿಸಿರುವ ಕಾಂತಾರ ಈ ವಾರದ ಕೊನೆಯಲ್ಲಿ ಸಿನಿಮಾ 200 ಕೋಟಿ ಕ್ಲಬ್ ಸೇರಲಿದೆ ಎನ್ನುತ್ತಾರೆ ಟ್ರೇಡ್ ಅನಾಲಿಸಿಸ್ ಹೇಳಿದೆ.

karnatakaspecial.in

https://karnatakaspecial.in/

Related post

Phone icon
Call Now
Reach us!
WhatsApp icon
Chat Now