• March 14, 2026

ಕಾಂತಾರ ಚಿತ್ರದ ಎಫೆಕ್ಟ್: ದೈವ ನರ್ತಕರಿಗೊಲಿದ ರಾಜ್ಯೋತ್ಸವ ಪ್ರಶಸ್ತಿ

ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸಿರುವ ಕಾಂತಾರ ಚಿತ್ರಮಾ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ದೇಶ, ವಿದೇಶದಲ್ಲಿ ಭರ್ಜರಿ ಪ್ರದರ್ಶನ ಕಾಣುತ್ತಿರುವ ಕಾಂತಾರ ಚಿತ್ರವನ್ನು ಸೂಪರ್ ಸ್ಟಾರ್ ಗಳು ಮೆಚ್ಚಿಕೊಂಡಿದ್ದಾರೆ. ಜೊತೆಗೆ ಕಾಂತಾರ ಚಿತ್ರ ಬಿಡುಗಡೆ ಆದ ಬಳಿಕ ಹಲವು ಬದಲಾವಣೆಗಳು ಆಗಿವೆ. ಕಾಂತಾರ ಚಿತ್ರ ಬಿಡುಗಡೆ ಆದ ಬಳಿಕ ಸರ್ಕಾರ ದೈವ ನರ್ತಕರಿಗೆ ಮಾಶಾಸಾನ ನೀಡಲು ಮುಂದಾಗಿದೆ. ಇದೀಗ ಇದೇ ಮೊದಲ ಭಾರಿಗೆ ದೈವ ನರ್ತಕರೊಬ್ಬರಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ. ಅಪರೂಪದ ದೈವ ನರ್ತಕರಾಗಿರುವ 68 ವರ್ಷ ವಯಸ್ಸಿನ ಉಡುಪಿ ಜಿಲ್ಲೆಯ ಕಾಪು ಸಮೀಪದ ಮೂಳೂರಿನ ಗುಡ್ಡ ಪಾಣಾರ ಅವರು ಈ ವರ್ಷದ ರಾಜ್ಯೋತ್ಸವ ಪ್ರಶಸ್ತಿಗೆ ಪಾತ್ರರಾಗಿದ್ದಾರೆ. ಈ ಮೂಲಕ ಮುಖ್ಯವಾಹಿನಿಯಲ್ಲಿ ಇರದ ಇವರ ಜನಪದ ಪ್ರತಿಭೆಗೆ ಸೂಕ್ತ ಮನ್ನಣೆ ದೊರೆತಂತಾಗಿದೆ. ಪಿಲಿಕೋಲದಲ್ಲಿ ದೈವ ನರ್ತಕ ರಾಗಿ ಸೇವೆ ಸಲ್ಲಿಸುತ್ತಿರುವ ಗುಡ್ಡ ಪಾಣರರಿಗೆ ಜಾನಪದ ವಿಭಾಗದಲ್ಲಿ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ. ತನ್ನ 25ನೇ ವಯಸ್ಸಿನಿಂದ ದೈವ ನರ್ತಕ ರಾಗಿ ಗುಡ್ಡ ಪಾಣರ ಸೇವೆ ಸಲ್ಲಿಸುತ್ತಾ ಬಂದಿದ್ದಾರೆ. ಕಾಪುವಿನಲ್ಲಿ ಎರಡು ವರ್ಷಕ್ಕೊಮ್ಮೆ ನಡೆಯುವ ವಿಶಿಷ್ಟ ಪಿಲಿಕೋಲದಲ್ಲಿ ಪಿಲಿ ಪಾತ್ರಧಾರಿ ಆಗಿ ಜನರ ಗಮನ ಸೆಳೆದಿದ್ದಾರೆ. ಇಷ್ಟೇ ಅಲ್ಲದೆ ಕಾಂತರಾ ಸಿನಿಮಾದ ಕಾಣಿಸಿಕೊಂಡ ದೈವಾರಾಧಕ ನಾಗರಾಜ ಪಾಣ ಅವರನ್ನು ಉಡುಪಿ ಜಿಲ್ಲಾಡಳಿತ ಗುರುತಿಸಿ ಜಿಲ್ಲಾ ಮಟ್ಟದಲ್ಲಿ ಪ್ರಶಸ್ತಿ ನೀಡಿ ಗೌರವಿಸುತ್ತಿದೆ. ಯಾವುದೇ ಅರ್ಜಿ ಹಾಕದೆ ನಾಗರಾಜ ಪಾಣ ಅವರಿಗೆ ಜಿಲ್ಲಾ ಮಟ್ಟದ ಪ್ರಶಸ್ತಿಯ ಗೌರವ ನೀಡಲಾಗುತ್ತಿದೆ.ka

karnatakaspecial.in

https://karnatakaspecial.in/

Related post

Phone icon
Call Now
Reach us!
WhatsApp icon
Chat Now