ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಮೃತ ಪ್ರವೀಣ್ ನೆಟ್ಟಾರು ಮನೆ ನಿರ್ಮಾಣಕ್ಕೆ ಅಡಿಪಾಯ ಹಾಕಿದ ಬಿಜೆಪಿ ಸರ್ಕಾರ
ಪ್ರವೀಣ್ ಅವರ ಹಳೆಯ ,ಮನೆಯನ್ನು ಕೆಡವಿ ಅದೇ ಜಾಗದಲ್ಲಿ ಹೊಸ ಮನೆ ನಿರ್ಮಾಣಕ್ಕೆ ಶಂಕು ಸ್ಥಾಪನೆ ನೆರವೇರಿಸಲಾಗಿದೆ. 60 ಲಕ್ಷ ರೂ. ವೆಚ್ಚದಲ್ಲಿ 2,700 ಚದರ ಅಡಿಯ ಮನೆ ನಿರ್ಮಾಣ ಆಗಲಿದ್ದು, ಮುಂದಿನ ವರ್ಷದ ಮೇ ತಿಂಗಳ ಒಳಗಾಗಿ ಮನೆಯನ್ನು ಪೂರ್ಣ ಮಾಡಿಕೊಡಲು ಸರ್ಕಾರ ನಿರ್ಧರಿಸಿದೆ ಎಂದು ನಳೀನ್ ಕುಮಾರ್ ಕಟೀಲ್ ಹೇಳಿದ್ದಾರೆ.
ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಎಸ್.ಅಂಗಾರ, ಪುತ್ತೂರು ಶಾಸಕ ಸಂಜೀವ ಮಠಂದೂರು, ಪ್ರವೀಣ್ ಅವರ ತಂದೆ, ತಾಯಿ, ಪತ್ನಿ ಸೇರಿದಂತೆ ಸಾಕಷ್ಟು ಮಂದಿ ಉಪಸ್ಥಿತರಿದ್ದರು. ಇದೇ ಪ್ರವೀಣ್ ಸಮಾಧಿಗೆ ನಮನ ಸಲ್ಲಿಸಲಾಯಿತು.
