ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಧೋನಿ ನಿರ್ಮಾಣದ ಚೊಚ್ಚಲ ಸಿನಿಮಾ ಬಿಡುಗಡೆಗೆ ರೆಡಿ…ಕರ್ನಾಟಕದಲ್ಲಿಯೂ ರಿಲೀಸ್ ಆಗಲಿದೆ ಲೆಟ್ಸ್ ಗೆಟ್ ಮ್ಯಾರೀಡ್
ಫ್ಯಾಮಿಲಿ ಎಂಟರ್ಟೇನರ್ ಕಥಾಹಂದರ ಹೊಂದಿರುವ ಸಿನಿಮಾವನ್ನು ರಮೇಶ್ ತಮಿಳ್ಮಣಿ ನಿರ್ದೇಶನ ಮಾಡಿದ್ದಾರೆ. ನಾಯಕ ಹರೀಶ್ ಕಲ್ಯಾಣ್, ನಾಯಕಿ ಇವಾನಾ ನಟಿಸಿದ್ದು, ಹಿರಿಯ ನಟಿ ನದಿಯಾ, ಯೋಗಿ ಬಾಬು ಮತ್ತು ಆರ್‌ಜೆ ವಿಜಯ್ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.
ಚಿತ್ರೀಕರಣ ಮುಗಿಸಿ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿರುವ ಲೆಟ್ಸ್ ಗೆಟ್ ಮ್ಯಾರೀಡ್ ಸಿನಿಮಾವನ್ನು ಆದಷ್ಟು ಬೇಗ ತೆರೆಗೆ ತರಲು ಚಿತ್ರತಂಡ ಪ್ಲಾನ್ ಹಾಕಿಕೊಂಡಿದೆ. ರಮೇಶ್ ತಮಿಳ್ಮಣಿ ಸಿನಿಮಾಗೆ ಆಕ್ಷನ್ ಕಟ್ ಹೇಳುವುದರ ಜೊತೆಗೆ ಸಂಗೀತ ನಿರ್ದೇಶನದ ಜವಾಬ್ದಾರಿ ಕೂಡ ನಿಭಾಯಿಸಿದ್ದಾರೆ. ಟೀಸರ್ ಗೆ ಅದ್ಭುತ ರೆಸ್ಪಾನ್ಸ್ ಸಿಕ್ಕಿದ್ದು, ಶೀಘ್ರದಲ್ಲೇ ಆಡಿಯೋ ಹಾಗೂ ಟ್ರೇಲರ್‌ನ್ನು ಚಿತ್ರತಂಡ ಬಿಡುಗಡೆ ಮಾಡಲಿದೆ.
