ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
2024ರ ಶಿವರಾತ್ರಿಗೆ ಡಬಲ್ ಇಸ್ಮಾರ್ಟ್ ಚಿತ್ರ ರಿಲೀಸ್
ಡಬಲ್ ಮಾಸ್ ಹಾಗೂ ಡಬಲ್ ಮನರಂಜನೆ ನೀಡಲು ಸಜ್ಜಾಗಿರುವ ಪುರಿ ಜಗನ್ನಾಥ್ ಡಬಲ್ ಇಸ್ಮಾರ್ಟ್ ಸಿನಿಮಾದ ಶೂಟಿಂಗ್ ಇದೇ ತಿಂಗಳ 12ರಿಂದ ಶುರುವಾಗಲಿದೆ. ಮುಂದಿನ ವರ್ಷ ಅಂದ್ರೆ 2024 ಮಾರ್ಚ್ 8 ರಂದು ಶಿವರಾತ್ರಿ ಹಬ್ಬಕ್ಕೆ ಈ ಚಿತ್ರ ತೆರೆಗೆ ಬರಲಿದೆ.
ಪುರಿ ಜಗನ್ನಾಥ್ ಕಥೆ ಬರೆದು ನಿರ್ದೇಶಿಸುತ್ತಿರುವ ಡಬಲ್ ಇಸ್ಮಾರ್ಟ್ ಸಿನಿಮಾವನ್ನು ಪುರಿ ಕನೆಕ್ಟ್ಸ್ ನಡಿ ಚಾರ್ಮಿ ಕೌರ್ ಹಾಗೂ ಪುರಿ ಜಗನ್ನಾಥ್ ನಿರ್ಮಿಸುತ್ತಿದ್ದಾರೆ. ಲೈಗರ್ ಸಿನಿಮಾದಲ್ಲಿ ಖಳನಾಯಕ ಘರ್ಜಿಸಿದ್ದ ವಿಷು ರೆಡ್ಡಿ ಪುರಿ ಕನೆಕ್ಟ್ ಸಿಇಒ ಆಗಿ ಕೆಲಸ ಮಾಡುತ್ತಿದ್ದಾರೆ. ಭಾರೀ ಬಜೆಟ್ ನಲ್ಲಿ ತಯಾರಾಗುತ್ತಿರುವ ಈ ಸಿನಿಮಾ ತಾಂತ್ರಿಕವಾಗಿ ಶ್ರೀಮಂತಿಕೆಯಿಂದ ಕೂಡಿರಲಿದೆ.
ಮುಂದಿನ ವರ್ಷದ ಶಿವರಾತ್ರಿ ಹಬ್ಬಕ್ಕೆ ಬಿಡುಗಡೆಯಾಗಲಿರುವ ಈ ಚಿತ್ರ ತೆಲುಗು, ತಮಿಳು, ಕನ್ನಡ, ಹಿಂದಿ ಹಾಗೂ ಮಲಯಾಳಂ ಭಾಷೆಯಲ್ಲಿ ಮೂಡಿ ಬರಲಿದೆ. ಉಳಿದ ತಾರಾಬಳಗ ಹಾಗೂ ತಾಂತ್ರಿಕ ವರ್ಗದ ಮಾಹಿತಿಯನ್ನು ಶೀಘ್ರದಲ್ಲೇ ಘೋಷಣೆ ಮಾಡುವುದಾಗಿ ಚಿತ್ರತಂಡ ತಿಳಿಸಿದೆ.
