ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಉಪ್ಪಿ ಹುಟ್ಟುಹಬ್ಬಕ್ಕೆ “ಬುದ್ದಿವಂತ- 2” ಚಿತ್ರ ಬಿಡುಗಡೆ
“ಬುದ್ದಿವಂತ” ಎಂದೇ ಜನಪ್ರಿಯರಾಗಿರುವ ಉಪೇಂದ್ರ ಅವರ ಹುಟ್ಟುಹಬ್ಬ ಸೆಪ್ಟೆಂಬರ್ 18 ರಂದು. ಅವರ ಹುಟ್ಟುಹಬ್ಬದ ಸಮಯದಲ್ಲಿ ಈ ಚಿತ್ರ ಬಿಡುಗಡೆಯಾಗುತ್ತಿದ್ದು, ಅಭಿಮಾನಿಗಳ ಸಂತಸ ಇಮ್ಮಡಿಯಾಗಲಿದೆ.
ಕನ್ನಡ ಚಿತ್ರರಂಗದಲ್ಲಿ ಸಾಕಷ್ಟು ಯಶಸ್ವಿ ಚಿತ್ರಗಳನ್ನು ನಿರ್ಮಾಣ ಮಾಡಿರುವ ಡಾ.ಟಿ.ಆರ್ ಚಂದ್ರಶೇಖರ್, ತಮ್ಮ ಕ್ರಿಸ್ಟಲ್ ಪಾರ್ಕ್ ಸಿನಿಮಾಸ್ ಲಾಂಛನದಲ್ಲಿ ನಿರ್ಮಾಣ ಮಾಡಿರುವ ಮತ್ತೊಂದು ಅದ್ದೂರಿ ಚಿತ್ರ “ಬುದ್ದಿವಂತ 2”.
ಜೈದೇವ್ ನಿರ್ದೇಶನದ ಈ ಚಿತ್ರಕ್ಕೆ ಗುರುಕಿರಣ್ ಸಂಗೀತ ನೀಡಿದ್ದಾರೆ. ಎಸ್ ನವೀನ್ ಕುಮಾರ್ ಛಾಯಾಗ್ರಹಣ, ಕೆ.ಎಂ.ಪ್ರಕಾಶ್ ಸಂಕಲನ ಜಾಗೂ ರವಿವರ್ಮ, ವಿಕ್ರಮ್ ಅವರ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ.
ಉಪೇಂದ್ರ ಅವರಿಗೆ ನಾಯಕಿಯರಾಗಿ ಸೋನಾಲ್ ಮೊಂಟೆರೊ ಹಾಗೂ ಮೇಘನರಾಜ್ ನಟಿಸಿದ್ದಾರೆ. ಶ್ರೀನಗರ ಕಿಟ್ಟಿ ಅವರು ವಿಶೇಷಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.
