• February 10, 2026

ಕಾಳಿ ಕೈಯಲ್ಲಿ ಸಿಗರೇಟು ಕೊಟ್ಟ ನಿರ್ದೇಶಕಿ ಲೀನಾ ಮಣಿಮೇಕಲೈ ಟ್ವಿಟ್ ತಡೆ

ತಮ್ಮ ಸಾಕ್ಷ್ಯಚಿತ್ರದಲ್ಲಿ ಕಾಳಿ ದೇವತೆಯ ಒಂದು ಕೈಯಲ್ಲಿ ಸಿಗರೇಟು ಮತ್ತು ಕೈಯಲ್ಲಿ ಎಲ್ಜಿಬಿಟಿಕ್ಯೂ ಭಾವುಟ ಕೊಟ್ಟ ಕಾರಣಕ್ಕಾಗಿ ತಮಿಳಿನ ಖ್ಯಾತ ನಿರ್ದೇಶಕಿ ಲೀನಾ ಮಣಿಮೇಕಲೈ ವಿರುದ್ಧ ದೇಶಾದ್ಯಂತ ಆಕ್ರೋಶ ಹೊತ್ತಿಕೊಡಿದೆ. ಈಗಾಗ್ಲೆ ಕೆಲ ಕಡೆ ಲೀನಾ ವಿರುದ್ಧ ದೂರುಗಳು ದಾಖಲಾಗಿದ್ದು, ಮುಂಬೈನಲ್ಲಿ ಎಫ್.ಐ.ಆರ್ ಕೂಡ ದಾಖಲಾಗಿತ್ತು. ಇದೀಗ ಭಾರತದಲ್ಲಿ ಅವರ ಟ್ವಿಟರ್ ಖಾತೆಯನ್ನು ತಡೆಹಿಡಿಯಲಾಗಿದೆ. ಲೀನಾ ಅವರು ತಮ್ಮ ಸಾಕ್ಷ್ಯಚಿತ್ರದ ಪೋಸ್ಟರ್ ಒಂದನ್ನು ಟ್ವಿಟರ್ ಖಾತೆಯಲ್ಲಿ ಶೇರ್ ಮಾಡಿದ್ದು, ಆ ಪೋಸ್ಟರ್ ಇದೀಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಧಾರ್ಮಿಕ ಭಾವನೆಗಳಿಗೆ ಲೀನಾ ಧಕ್ಕೆ ಮಾಡಿದ್ದಾರೆ ಎನ್ನುವ ಕಾರಣಕ್ಕಾಗಿ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ. ಲೀನಾ ಅವರು ಕಾಳಿ ಕುರಿತಾಗಿ ಸಾಕ್ಷ್ಯ ಚಿತ್ರ ಮಾಡಿದ್ದು, ಕಾಳಿಯ ಒಂದು ಕೈಲಿ ಸಿಗರೇಟು ಮತ್ತೊಂದು ಕೈಲಿ ಎಲ್ಜಿಬಿಟಿಕ್ಯೂ ಧ್ವಜವನ್ನು ನೀಡಲಾಗಿದೆ. ಈ ಪೋಸ್ಟರ್ ಅನ್ನು ಶೇರ್ ಮಾಡಿರುವ ಲೀನಾ, ಈ ಸಾಕ್ಷ್ಯ ಚಿತ್ರವು ಕೆನಡಾ ಫಿಲ್ಮ್ ಫೇಸ್ಟಿವಲ್ ನಲ್ಲಿ ಬಿಡುಗಡೆ ಆಗುತ್ತಿದೆ. ಈ ಕಾರಣಕ್ಕಾಗಿ ನಾನು ಉತ್ಸುಕಳಾಗಿದ್ದೇನೆ ಎಂದು ಬರೆದುಕೊಂಡಿದ್ದಾರೆ. ಟ್ವಿಟರ್ ಬಳಕೆದಾರರು ಈ ಕುರಿತು ಆಕ್ರೋಶ ವ್ಯಕ್ತ ಪಡಿಸಿದ್ದು, ಈ ನಿರ್ಮಾಪಕಿಯನ್ನು ಕೂಡಲೇ ಬಂಧಿಸಬೇಕು ಎಂದು ಆಗ್ರಹಿಸುತ್ತಿದ್ದಾರೆ. ಕೋಟ್ಯಂತರ ಹಿಂದೂಗಳ ಭಾವನೆಗೆ ಆಕೆ ಧಕ್ಕೆ ಮಾಡಿದ್ದರಿಂದ, ಆ ಸಾಕ್ಷ್ಯ ಚಿತ್ರವನ್ನು ನಿಷೇಧ ಮಾಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಆಗ್ರಹಿಸಿದ್ದಾರೆ. ತಮಿಳು ನಾಡು ಮೂಲದ ಈ ಲೀನಾ ಸಲಿಂಗಿಗಳ ಬೆಂಬಲಕ್ಕೆ ಈ ಹಿಂದೆ ನಿಂತಿದ್ದರು.

karnatakaspecial.in

https://karnatakaspecial.in/

Related post

Phone icon
Call Now
Reach us!
WhatsApp icon
Chat Now