• June 19, 2026

ಕ್ರೇಜಿಸ್ಟಾರ್ ಪುತ್ರನಿಗೆ ಕೂಡಿ ಬಂತು ಕಂಕಣ ಭಾಗ್ಯ: ಮನೋರಂಜನ್ ಕೈ ಹಿಡಿಯಲಿರೋ ಹುಡುಗಿ ಯಾರು ಗೊತ್ತಾ?

ಕ್ರೇಜಿಸ್ಟಾರ್ ರವಿಚಂದ್ರನ್ ಕುಟುಂಬದಲ್ಲಿ ಸದ್ಯದಲ್ಲೇ ಮಂಗಳ ವಾದ್ಯದ ಸದ್ದು ಮೊಳಗಲಿದೆ. ಕಳೆದ ಕೆಲ ವರ್ಷಗಳ ಹಿಂದೆ ಅದ್ದೂರಿಯಾಗಿ ಮಗಳ ಮದುವೆ ಮಾಡಿದ್ದ ರವಿಚಂದ್ರನ್ ಇದೀಗ ಮಗನ ಮದುವೆ ತಯಾರಿಯಲ್ಲಿ ಬ್ಯುಸಿಯಾಗಿದ್ದಾರೆ. ಮೂಲಗಳ ಪ್ರಕಾರ ಆಗಸ್ಟ್ 21 ಹಾಗೂ 22ರಂದು ರವಿಚಂದ್ರನ್ ಹಾಗೂ ಸುಮತಿ ದಂಪತಿಯ ಹಿರಿಯ ಮಗ ಮನೋರಂಜನ್ ಹಸೆಮಣೆ ಏರಲಿದ್ದಾರಂತೆ. ವೃತ್ತಿಯಲ್ಲಿ ವೈದ್ಯರಾಗಿರುವ ಯುವತಿಯ ಜೊತೆ ಮನೋರಂಜನ್ ಮದುವೆ ಆಗಲಿದ್ದಾರೆ ಎನ್ನಲಾಗ್ತಿದೆ. ಆದರೆ ಈ ಬಗ್ಗೆ ರವಿಚಂದ್ರನ್ ಆಗಲಿ ಅಥವಾ ಅವರ ಕುಟುಂಬ ಸದಸ್ಯರಾಗಲಿ ಯಾವುದೇ ಮಾಹಿತಿ ಬಿಟ್ಟುಕೊಟ್ಟಿಲ್ಲ. 2017ರಲ್ಲಿ ತೆರೆಕಂಡ ಸಾಹೇಬ ಸಿನಿಮಾದ ಮೂಲಕ ಬಣ್ಣದ ಲೋಕಕ್ಕೆ ಎಂಟ್ರಿಕೊಟ್ಟ ಮನೋರಂಜನ್ ಬಳಿಕ ಬೃಹಸ್ಪತಿ, ಮುಗಿಲು ಪೇಟೆ ಹಾಗೂ ಈ ವರ್ಷ ತೆರೆ ಕಂಡ ಪ್ರಾರಂಭ ಸಿನಿಮಾದಲ್ಲಿ ಬಣ್ಣ ಹಚ್ಚಿದ್ದಾರೆ. ಒಂದರ ಹಿಂದೊಂದರಂತೆ ಸಿನಿಮಾಗಳಲ್ಲಿ ಬ್ಯುಸಿಯಾಗಿರೋ ಮನೋರಂಜನ್ ಇದೀಗ ವೈವಾಹಿಕ ಜೀವನಕ್ಕೆ ಕಾಲಿಡುತ್ತಿದ್ದಾರೆ.

karnatakaspecial.in

https://karnatakaspecial.in/

Related post

Phone icon
Call Now
Reach us!
WhatsApp icon
Chat Now