• June 19, 2026

ಆಗಸ್ಟ್‌ನಲ್ಲಿ ಬರುತ್ತಿದ್ದಾರೆ “ರಾಕ್ಷಸರು”.

ಕನ್ನಡ ಚಿತ್ರರಂಗದಲ್ಲಿ ಸಿಂಹಾದ್ರಿ ಪ್ರೊಡಕ್ಷನ್ಸ್ ಮೂಲಕ ಉತ್ತಮ ಚಿತ್ರಗಳನ್ನು ನೀಡಿರುವ ರಮೇಶ್ ಕಶ್ಯಪ್ ನಿರ್ಮಿಸಿರುವ “ರಾಕ್ಷಸರು” ಚಿತ್ರ ಆಗಸ್ಟ್ ನಲ್ಲಿ ದೇಶದಾದ್ಯಂತ ತೆರೆ ಕಾಣುತ್ತಿದೆ. ಕನ್ನಡ, ತೆಲುಗು, ತಮಿಳು, ಮಲೆಯಾಳಂ ಹಾಗೂ ಹಿಂದಿ ಭಾಷೆಗಳಲ್ಲಿ ಈ ಚಿತ್ರ ನಿರ್ಮಾಣವಾಗಿದೆ. ಇದೊಂದು ಸಖತ್ ಕ್ರೈಮ್ ಥ್ರಿಲ್ಲರ್ ಚಿತ್ರ. ಐದು ಜನ ಕ್ರಮಿನಲ್ ಗಳು ಮಾಡಬಾರದ ದುಷ್ಕೃತ್ಯಗಳನ್ನು ಮಾಡಿ ತಲೆ ಮರಸಿಕೊಂಡಿರುತ್ತಾರೆ. ಇವರನ್ನು ಪೊಲೀಸರು ಹೇಗೆ ಹುಡುಕುತ್ತಾರೆ? ಎಂಬುದೇ ಕಥಾಹಂದರ. ದಂಡುಪಾಳ್ಯದ ಕ್ರಿಮಿನಲ್ ಗಳನ್ನು ಮೀರಿಸುವ ಕ್ರಿಮಿನಲ್ ಗಳು ಈ “ರಾಕ್ಷಸರು”. ರಜತ್ ಈ ಚಿತ್ರವನ್ನು ನಿರ್ದೇಶಿಸಿದ್ದಾರೆ. ಇದು ಅವರ ಚೊಚ್ಚಲ ಚಿತ್ರ. ಚಿತ್ರ ಸಿದ್ದವಾಗಿ ಬಹಳ ದಿನಗಳಾಗಿದೆ. ಆದರೆ ಸೆನ್ಸಾರ್ ಮಂಡಳಿ ಚಿತ್ರವನ್ನು ವೀಕ್ಷಿಸಿ, ಕ್ರೈಂ ಹೆಚ್ಚಾಗಿರುವುದರಿಂದ ಬಿಡುಗಡೆಗೆ ಒಪ್ಪಿಗೆ ನೀಡಲು ನಿರಾಕರಿಸಿದರು. ಆ ನಂತರ ನಿರ್ಮಾಪಕರ ಮನವಿ ಮೇರೆಗೆ ಕೆಲವು ಕಟ್ ಗಳ ಜೊತೆಗೆ A ಸರ್ಟಿಫಿಕೇಟ್ ನೀಡಿ ಬಿಡುಗಡೆಗೆ ಸೆನ್ಸಾರ್ ಮಂಡಳಿ ಒಪ್ಪಿಗೆ ನೀಡಿದೆ. A ಸರ್ಟಿಫಿಕೇಟ್ ನೊಂದಿಗೆಆಗಸ್ಟ್‌ ಎರಡನೇ ವಾರ ಚಿತ್ರ ಭಾರತದಾದ್ಯಂತ ತೆರೆ ಕಾಣುತ್ತಿದೆ ಎಂದು ತಿಳಿಸಿರುವ ನಿರ್ಮಾಪಕರು, ಈ ಚಿತ್ರವನ್ನು ಆರಕ್ಷಕರಿಗೆ ಅರ್ಪಿಸಲು ನಿರ್ಧರಿಸಿದ್ದಾರೆ. ಎರಡು ಹಾಡುಗಳಿರುವ ಈ‌ ಚಿತ್ರಕ್ಕೆ ಎಮಿಲ್ ಸಂಗೀತ ನೀಡಿದ್ದಾರೆ. ರಾಜಶೇಖರ್ ಸಂಭಾಷಣೆ ಬರೆದಿದ್ದಾರೆ. ಜನಾರ್ದನ ಬಾಬು ಛಾಯಾಗ್ರಹಣ, ಕೆ.ಎಂ.ಪ್ರಕಾಶ್ ಸಂಕಲನ, ಥ್ರಿಲ್ಲರ್ ಮಂಜು ಸಾಹಸ ನಿರ್ದೇಶನ ಹಾಗೂ ಮನು ಅವರ ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ. ಡೈಲಾಗ್ ಕಿಂಗ್ ಸಾಯಿಕುಮಾರ್, ರಾಜಶೇಖರ್, ನಾಜರ್, ಸುಮನ್, ಕಿರಣ್ ಸುನೀಲ್, ತ್ರಿವೇಣಿ, ಅವಿನಾಶ್ ನೀರಜ್ ಯಾದವ್, ಹರ್ಷಿತ್, ಚೈತ್ರ, ಮಾನಸ, ಆಶಾ, ಮಂಜುಳ, ಸುರೇಖ, ರಚನ, ಕಮಲ, ಚಂದ್ರಕಲಾ ರಾಧ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

karnatakaspecial.in

https://karnatakaspecial.in/

Related post

Phone icon
Call Now
Reach us!
WhatsApp icon
Chat Now