• June 17, 2026

ವಿಕ್ರಾಂತ್ ರೋಣ ಟೀಂನಿಂದ ಮತ್ತೊಂದು ಸರ್ಪ್ರೈಸ್: ಕಿಚ್ಚ ವರ್ಸ್ ಬಗ್ಗೆ ಕೇಳಿ ಥ್ರಿಲ್ ಆದ ಫ್ಯಾನ್ಸ್

ಕಿಚ್ಚ ಸುದೀಪ್ ನಟನೆಯ ಬಹು ನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾ ವಿಕ್ರಾಂತ್ ರೋಣ ತೆರೆಗೆ ಬರೋಕೆ ಇನ್ನೇನು ಕೆಲವೇ ಕೆಲವು ದಿನಗಳು ಮಾತ್ರವೇ ಭಾಕಿ ಉಳಿದಿದೆ. ಈಗಾಗ್ಲೆ ಚಿತ್ರದ ಟ್ರೈಲರ್ ಹಾಗೂ ರಾ ರಾ ರಕ್ಕಮ್ಮ ಹಾಡು ದೊಡ್ಡ ಮಟ್ಟದಲ್ಲಿ ಸದ್ದು ಮಾಡಿದ್ದು ಸಿನಿಮಾ ನೋಡೋಕೆ ಅಭಿಮಾನಿಗಳನ್ನು ಕಾದು ಕೂರುವಂತೆ ಮಾಡಿದೆ. ಅನೂಪ್ ಬಂಡಾರಿ ನಿರ್ದೇಶನದ ವಿಕ್ರಾಂತ್ ರೋಣ ಸಿನಿಮಾ ಆರಂಭದಿಂದಲೂ ಒಂದಲ್ಲ ಒಂದು ರೀತಿಯಲ್ಲಿ ಅಭಿಮಾನಿಗಳಿಗೆ ಸಪ್ರೈಸ್ ನೀಡುತ್ತಲೆ ಬಂದಿದೆ. ಇದೀಗ ಕಿಚ್ಚ ಸುದೀಪ್ ಕಡೆಯಿಂದ ಮತ್ತೊಂದು ಸರ್ಪ್ರೈಸ್ ಸಿಕ್ಕಿದ್ದು ಫ್ಯಾನ್ಸ್ ಮತ್ತಷ್ಟು ಥ್ರಿಲ್ ಆಗಿದ್ದಾರೆ. ವಿಕ್ರಾಂತ್ ರೋಣ ಸಿನಿಮಾ ಮೆಟಾ ವರ್ಸ್ ಲೋಕಕ್ಕೆ ಎಂಟ್ರಿಕೊಟ್ಟಿದ್ದು ಎನ್ ಎಫ್ ಟಿ ಸಂಸ್ಥೆ ಕಿಚ್ಚ ವರ್ಸ್ ಮೂಲಕ ವಿಕ್ರಾಂತ್ ರೋಣ ಚಿತ್ರವನ್ನು ಪ್ರಸ್ತುತ ಪಡಿಸಲಿದೆ. ಎನ್ ಎಫ್ ಟಿ ಸಂಸ್ಥೆ ವಿಕ್ರಾಂತ್ ರೋಣ ಚಿತ್ರತಂಡದೊಂದಿಗೆ ನಿನ್ನೆ ‘ಕಿಚ್ಚ ವರ್ಸ್’ ಲಾಂಚ್ ಮಾಡಿದೆ.  ಎನ್ ಎಫ್ ಟಿ ಸಂಸ್ಥೆ ಸೃಷ್ಟಿಸಿರುವ ಕಿಚ್ಚ ವರ್ಸ್ ಜಗತ್ತು ಕಿಚ್ಚನಿಗೂ ಸಖತ್ ಸರ್ಪ್ರೈಸ್ ಆಗಿದ್ದು ಮೊದಲ ಬಾರಿ ಇದರ ಬಗ್ಗೆ ಕೇಳಿದಾಗ ಹೇಗಿರುತ್ತೋ ಎಂಬ ಕಾಲ್ಪನಿಕ ಲೋಕದಲ್ಲಿದ್ದೆ. ನನಗೂ ಇದು ಅರ್ಥವಾಗಿರಲಿಲ್ಲ. ಆದ್ರೆ ಅದನ್ನು ಸ್ವತಃ ನಾನೇ ನೋಡಿದಾಗ. ಅನುಭವಿಸಿದಾಗ ತುಂಬಾನೇ ಖುಷಿ ಪಟ್ಟೆ. ತುಂಬಾನೇ ಅಧ್ಬುತ ಕೆಲಸವನ್ನು  ಈ ತಂಡ ಮಾಡಿದೆ ಖಂಡಿತ ಎಲ್ಲರಿಗೂ ಇಂತಹದ್ದೇ ಒಂದು ಒಳ್ಳೆಯ ಅನುಭವವನ್ನು ಇದು ನೀಡಲಿದೆ  ಎಂಬ ಭರವಸೆ ಇದೆ ಎಂದು ಕಿಚ್ಚ ಸುದೀಪ ಕಿಚ್ಚ ವರ್ಸ್ ಬಗ್ಗೆ ಸಂತಸ ಹಂಚಿಕೊಂಡಿದ್ದಾರೆ. ಕಿಚ್ಚ ವರ್ಸ್ ನಲ್ಲಿ ಸುದೀಪ್ ಜೊತೆ ಜೊತೆ ಮಾತನಾಡಬಹುದು. ಅವರ ಜೊತೆ ಸಮಯ ಕಳೆಯಬಹುದಾಗಿದೆ. ನೆಚ್ಚಿನ ನಟನೊಂದಿಗೆ ಕಾಲ ಕಳೆಯಲು ಕಿಚ್ಚ ವರ್ಸ್ ಅವಕಾಶ ಮಾಡಿಕೊಡಲಿದೆ. ಸುದೀಪ್ ಜೊತೆ ಒಮ್ಮೆಯಾದ್ರು ಮಾತನಾಡಬೇಕು, ಸುದೀಪ್ ರನ್ನ ಒಮ್ಮೆಯಾದರೂ ಭೇಟಿ ಮಾಡಬೇಕು ಎಂದುಕೊಂಡವರಿಗೆ ಈ ಕಿಚ್ಚ ವರ್ಸ್ ಸಖತ್ ಖುಷಿ ನೀಡಲಿದೆ. ಕಿಚ್ಚ ವರ್ಸ್ ಲೋಕವನ್ನು ಪ್ರವೇಶಿಸಲು ಎನ್ ಎಫ್ ಟಿ ಮೆಂಬರ್ ಶಿಪ್ ಕಾರ್ಡ್ ಪ್ರತಿಯೊಬ್ಬರು ಹೊಂದಿರಬೇಕು ಎಂದು ಕಾಫಿ ಅಂಡ್ ಬನ್ ಇನೋವೇಷನ್ಸ್ ಸಂಸ್ಥೆ ಸ್ಥಾಪಕಿ ಪ್ರಿಯಾ ಸುದೀಪ್ ಹೇಳಿದರು. ಸಾಕಷ್ಟು ನಿರೀಕ್ಷೆ ಮೂಡಿಸಿರುವ ವಿಕ್ರಾಂತ್ ರೋಣ ಸಿನಿಮಾ ಜುಲೈ 28ರಂದು ತೆರೆಗೆ ಬರಲಿದೆ. ಕಿಚ್ಚ ಸುದೀಪ್ ಜೊತೆಗೆ ನಿರೂಪ್ ಬಂಡಾರಿ ಕೂಡ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

karnatakaspecial.in

https://karnatakaspecial.in/

Related post

Phone icon
Call Now
Reach us!
WhatsApp icon
Chat Now