• March 15, 2026

ವರಮಹಾಲಕ್ಷ್ಮೀ ಹಬ್ಬಕ್ಕಿಲ್ಲ ‘ರಾಘವೇಂದ್ರ’ನ ರಸದೌತಣ: ರಿಲೀಸ್ ಡೇಟ್ ಮುಂದೂಡಿದ ಚಿತ್ರತಂಡ

ಸ್ಯಾಂಡಲ್ ವುಡ್ ನ ಖ್ಯಾತ ಪ್ರೊಡಕ್ಷನ್ ಹೌಸ್ ಗಳಲ್ಲಿ ಹೊಂಬಾಳೆಯು ಒಂದು. ವಿಜಯ್ ಕಿರಗಂದೂರು ಒಡೆತನದ ಹೊಂಬಾಳೆ ಬ್ಯಾನರ್ ನಲ್ಲಿ ಸಾಕಷ್ಟು ಸಿನಿಮಾಗಳು ತಯಾರಾಗುತ್ತಿವೆ. ದೊಡ್ಡ ದೊಡ್ಡ ಬಜೆಟ್ ಗಳ ಸಿನಿಮಾದಿಂದ ಹಿಡಿದು ಸಣ್ಣ ಸಣ್ಣ ಸಿನಿಮಾಗಳನ್ನು ನಿರ್ಮಿಸಿ ಸೈ ಎನಿಸಿಕೊಂಡಿರುವ ಹೊಂಬಾಳೆ ಫಿಲ್ಮ್ ಸದ್ಯ ನಾಲ್ಕೈದು ಸಿನಿಮಾಗಳನ್ನ ತೆರೆಗೆ ತರೋಕೆ ರೆಡಿಯಾಗಿದೆ. ಹೊಂಬಾಳೆ ಬ್ಯಾನರ್ ಅಡಿಯಲ್ಲಿ ಸದ್ಯದಲ್ಲೇ ತೆರೆಗೆ ಬರಲಿರೋ ಸಿನಿಮಾಗಳಲ್ಲಿ ಕಾಮಿಡಿ ಕಿಂಗ್ ಜಗ್ಗೇಶ್ ನಟನೆಯ ರಾಘವೇಂದ್ರ ಸ್ಟೋರ್ಸ್ ಸಿನಿಮಾ ಕೂಡ ಒಂದು. ಇದೇ ಮೊದಲ ಬಾರಿಗೆ ಜಗ್ಗೇಶ್ ಹಾಗೂ ನಿರ್ದೇಶಕ ಸಂತೋಷ್ ಆನಂದ್ ರಾಮ್ ಕಾಂಬಿನೇಷನ್ ನಲ್ಲಿ ರೆಡಿಯಾಗ್ತಿರೋ ರಾಘವೇಂದ್ರ ಸ್ಟೋರ್ಸ್ ಸಿನಿಮಾದ ಮೇಲೆ ಸಾಕಷ್ಟು ನಿರೀಕ್ಷೆ ಇದೆ. ಈಗಾಗ್ಲೆ ಚಿತ್ರದ ಟ್ರೈಲರ್ ನೋಡಿದ ಅಭಿಮಾನಿಗಳು ಸಿನಿಮಾಗಾಗಿ ಕಾದು ಕೂತಿದ್ದಾರೆ. ಇದೇ ಮೊದಲ ಬಾರಿಗೆ ನಿರ್ದೇಶಕ ಸಂತೋಷ್ ಆನಂದ್ ರಾಮ್ ಕಾಮಿಡಿ ಸಿನಿಮಾಗೆ ನಿರ್ದೇಶನ ಮಾಡ್ತಿರೋದ್ರಿಂದ ಅಭಿಮಾನಿಗಳ ಕ್ಯೂರಿಯಾಸಿಟಿಕೊಂಚ ಜಾಸ್ತಿಯಾಗಿದೆ. ಈ ಮೊದಲು ಚಿತ್ರತಂಡ ಹೇಳಿದಂತೆ ಆಗಸ್ಟ್ 5ರಂದು ಸಿನಿಮಾ ರಿಲೀಸ್ ಆಗಬೇಕಿತ್ತು. ಈ ಬಗ್ಗೆ ಟ್ವೀಟ್ ಮಾಡಿದ್ದ ಹೊಂಬಾಳೆ ಫಿಲ್ಮ್ಸ್ ವರಮಹಾಲಕ್ಷ್ಮಿಗೆ ನವರಸಗಳ ರಸದೌತಣ ಸವಿಯಲು ಸಿದ್ಧರಾಗಿ. ಇದೇ ಆಗಸ್ಟ್ 05.2022ರಿಂದ ಎಂದು ಬರೆಯಾಗಿತ್ತು. ಇದೀಗ ಹಿಂದಿನ ಟ್ವೀಟ್ ಅನ್ನು ರೀಟ್ವೀಟ್ ಮಾಡಿರುವ ಹೊಂಬಾಳೆ ಫಿಲ್ಮ್ಸ್ ಕಾರಣಾಂತರಗಳಿಂದ ನಿಮ್ಮಿಷ್ಟದ ರಸದೌತಣ ಸ್ವಲ್ಪ ವಿಳಂಬವಾಗುತ್ತಿದೆ ಎಂದು ಬರೆದುಕೊಂಡಿದೆ. ಕಿಚ್ಚ ಸುದೀಪ್ ನಟನೆಯ ವಿಕ್ರಾಂತ್ ರೋಣ ಸಿನಿಮಾ ಜುಲೈ 28ರಂದು ತೆರೆಗೆ ಬರ್ತಿದೆ. ಬಳಿಕ ಆಗಸ್ಟ್ 13ರಂದು ಯೋಗರಾಜ್ ಭಟ್ ನಿರ್ದೇಶನದ ಗಾಳಿಪಟ 2 ಸಿನಿಮಾ ರಿಲೀಸ್ ಆಗ್ತಿದೆ. ಈ ಎರಡು ಸಿನಿಮಾಗಳ ಮಧ್ಯೆ ರಾಘವೇಂದ್ರ ಸ್ಟೋರ್ಸ್ ಸಿನಿಮಾ ಬಿಡುಗಡೆ ಆದರೆ ಕಲೆಕ್ಷನ್ ಗೆ ಹೊಡೆತ ಬೀಳಲಿದೆ. ಇದೇ ಕಾರಣಕ್ಕೆ ಸಿನಿಮಾದ ಬಿಡುಗಡೆ ದಿನಾಂಕವನ್ನು ಸಿನಿಮಾ ತಂಡ ಮುಂದೂಡಿದೆ ಎನ್ನಲಾಗುತ್ತಿದೆ.

karnatakaspecial.in

https://karnatakaspecial.in/

Related post

Phone icon
Call Now
Reach us!
WhatsApp icon
Chat Now