• February 10, 2026

ಬಾಲಿವುಡ್ ನಿರ್ದೇಶಕ ಅವಿನಾಶ್ ದಾಸ್ ಬಂಧನ

ಕೇಂದ್ರ ಸಚಿವ ಅಮಿತ್ ಶಾ ಹಾಗೂ ಬಂಧಿತ ಐಎಎಸ್ ಅಧಿಕಾರಿ ಪೂಜಾ ಸಿಂಘಾಲ್ ಅವರ ಎಡಿಟ್ ಮಾಡಲಾದ ಫೋಟೋ ಹಂಚಿಕೊಂಡ ಆರೋಪದ ಮೇಲೆ ಬಾಲಿವುಡ್ ನಿರ್ದೇಶಕ ಅವಿನಾಶ್ ದಾಸ್ ಅವರನ್ನು ಅಹಮ್ಮದಾಬಾದ್ ಕ್ರೈಮ್ ಬ್ರ್ಯಾಂಚ್ ಅಧಿಕಾರಿಗಳು ಮುಂಬೈನಲ್ಲಿ ಬಂಧಿಸಿದ್ದಾರೆ. ಐಎಎಸ್ ಅಧಿಕಾರಿ ಪೂಜಾ ಸಿಂಘಾಲ್ ಅವರನ್ನು ಮನಿ ಲಾಂಡರಿಂಗ್ ಪ್ರಕರಣದಲ್ಲಿ ಇಡಿ ಅಧಿಕಾರಿಗಳು ಬಂಧಿಸಿದ್ದಾರೆ. ಈ ವೇಳೆ ಪೂಜಾ ಅವರ ಮನೆಯಲ್ಲಿ ಕಂತೆ ಕಂತೆ ಹಣ ಹಾಗೂ ಚಿನ್ನಾಭರಣ ಪತ್ತೆಯಾಗಿದ್ದು ಇದರ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಭಾರಿ ಸದ್ದು ಮಾಡಿತ್ತು. ಈ ವಿಡಿಯೋಗೆ ಅಮಿತ್ ಶಾ ಫೋಟೋ ಬಳಿಸಿ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದರು. ಅಲ್ಲದೆ ಅಮಿತ್ ಶಾ ಹಾಗೂ ಪೂಜಾ ಅವರ ಫೋಟೋಗಳನ್ನ ಎಡಿಟ್ ಮಾಡಿ ಹಂಚಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ ನಿರ್ದೇಶಕ ಅವಿನಾಶ್ ದಾಸ್ ಮೇಲೆ ಪ್ರಕರಣ ದಾಖಲಾಗಿದ್ದು ಇಂದು ಪೊಲೀಸರು ಬಂಧಿಸಿದ್ದಾರೆ. ಬಂಧನ ಬಗ್ಗೆ ಮೊದಲೇ ತಿಳಿದಿದ್ದ ಅವಿನಾಶ್ ಮೊದಲೇ ಜಾಮೀನು ಅರ್ಜಿ ಸಲ್ಲಿಸಿದ್ದರು. ಆದರೆ ಪೊಲೀಸರು ಪೂಜಾ ಸಿಂಘಾಲ್ ಅವರಿಗೆ ರಾಷ್ಟ್ರ ಧ್ವಜವನ್ನು ಉಡುಪಾಗಿ ಬಳಿಸಿ ಫೋಟೋ ಎಡಿಟ್ ಮಾಡಿ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡ ಆರೋಪದಡಿಯಲ್ಲಿ ಬಂಧಿಸಿದ್ದಾರೆ.

karnatakaspecial.in

https://karnatakaspecial.in/

Related post

Phone icon
Call Now
Reach us!
WhatsApp icon
Chat Now