ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಇಶಾನ್ ಗೆ ಆ್ಯಕ್ಷನ್ ಕಟ್ ಹೇಳಲಿದ್ದಾರೆ ಬಹದ್ದೂರ್ ಚೇತನ್
ಬಹದ್ದೂರ್, ಭರ್ಜರಿ, ಭರಾಟೆ ಹಾಗೂ ಜೇಮ್ಸ್ ನಂತಹ ನಾಲ್ಕು ಸೂಪರ್ ಹಿಟ್ ಸಿನಿಮಾಗಳನ್ನ ನೀಡಿದ್ದ ನಿರ್ದೇಶಕ ಬಹದ್ದೂರ್ ಚೇತನ್ ರೋಗ್ ಸಿನಿಮಾ ಖ್ಯಾತಿಯ ಇಶಾನ್ ಗೆ ಆಕ್ಷನ್ ಕಟ್ ಹೇಳೋಕೆ ರೆಡಿಯಾಗಿದ್ದಾರೆ. ಆ್ಯಕ್ಷನ್, ರೊಮ್ಯಾಂಟಿಕ್ ಸಿನಿಮಾದಲ್ಲಿ ಇಶಾನ್ ಕಾಣಿಸಿಕೊಳ್ತಿದ್ದು ಸಿನಿಮಾದ ಕುರಿತು ಉಳಿದ ಮಾಹಿತಿಯನ್ನು ಚಿತ್ರತಂಡ ಸೆಫ್ಟೆಂಬರ್ ತಿಂಗಳಲ್ಲಿ ಅಧಿಕೃತವಾಗಿ ತಿಳಿಸಲಿದೆ.
ಪೂರಿ ಜಗನ್ನಾಥ್ ನಿರ್ದೇಶನದ ರೋಗ್ ಸಿನಿಮಾದ ಮೂಲಕ ಬಣ್ಣದ ಬದುಕಿಗೆ ಎಂಟ್ರಿಕೊಟ್ಟ ಇಶಾನ್ ಮೊದಲ ಸಿನಿಮಾದಲ್ಲೇ ಭರವಸೆ ಮೂಡಿಸಿದ್ದಾರೆ. ಸದ್ಯ ಇಶಾನ್ ಹಾಗೂ ಆಶಿಕಾ ರಂಗನಾಥ್ ನಟನೆಯ ರೆಮೋ ಸಿನಿಮಾ ಆಗಸ್ಟ್ ತಿಂಗಳಲ್ಲಿ ತೆರೆಗೆ ಬರಲಿದ್ದು ಈ ಮಧ್ಯೆ ಇಶಾನ್ ಚೇತನ್ ನಿರ್ದೇಶನದ ಸಿನಿಮಾದಲ್ಲಿ ನಟಿಸಲು ರೆಡಿಯಾಗಿದ್ದಾರೆ.
ರೆಮೋ ಸಿನಿಮಾದಲ್ಲಿ ನಟ ಇಶಾನ್ ರಾಕ್ ಸ್ಟಾರ್ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದು, ಪಾತ್ರಕ್ಕಾಗಿ ಸಾಕಷ್ಟು ಮೇಕ್ ಓವರ್ ಮಾಡಿಕೊಂಡಿದ್ದಾರೆ. ಜೊತೆಗೆ ಚಿತ್ರಕ್ಕಾಗಿ ಡಬಲ್ ಡೆಕ್ಕರ್ ಗಿಟಾರ್ ಕಲಿತುಕೊಂಡು ಅಭಿನಯಿಸಿದ್ದಾರೆ.
