• March 18, 2026

ಪವರ್ ಸ್ಟಾರ್ ಪವನ್ ಕಲ್ಯಾಣ್ ಆಸ್ಪತ್ರೆಗೆ ದಾಖಲು

ಪವರ್ ಸ್ಟಾರ್ ಪವನ್ ಕಲ್ಯಾಣ್ ಆರೋಗ್ಯದಲ್ಲಿ ಏರುಪೇರಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಮೂಲಗಳ ಪ್ರಕಾರ ಪವನ್ ಕಲ್ಯಾಣ್ ಹೈ ಫೀವರ್ ನಿಂದ ಬಳಲುತ್ತಿದ್ದ ಕಾರಣಕ್ಕೆ ಆಸ್ಪತ್ರೆಗೆ  ಅಡ್ಮೀಟ್ ಮಾಡಲಾಗಿದೆ. ಪವನ್ ಕಲ್ಯಾಣ್ ಅನಾರೋಗ್ಯದ ಹಿನ್ನೆಲೆಯಲ್ಲಿ ಜನವಾಣಿ ಕಾರ್ಯಕ್ರಮದ ಅಂಗವಾಗಿ ಹಮ್ಮಿಕೊಂಡಿದ್ದ ಅನೇಕ ಕಾರ್ಯಕ್ರಮಗಳನ್ನು ಮುಂದೂಡಲಾಗಿದೆ. ಪವನ್ ಜೊತೆಗೆ ಪಕ್ಷದ ಕೆಲವು ಪ್ರಮುಖ ನಾಯಕರು, ಕಾರ್ಯಕ್ರಮ ಸಮಿತಿ ಸದಸ್ಯರು ಮತ್ತು ಭದ್ರತಾ ಸಿಬ್ಬಂದಿ ಸಹ ಜ್ವರದಿಂದ ಬಳಲುತ್ತಿದ್ದಾರೆ ಎನ್ನಲಾಗಿದೆ. ನೆಚ್ಚಿನ ನಟನ ಆರೋಗ್ಯದ ಬಗ್ಗೆ ತಿಳಿಯುತ್ತಿದ್ದಂತೆ ಆತಂಕಗೊಂಡಿರುವ ಅಭಿಮಾನಿಗಳು ಪವನ್ ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ.

karnatakaspecial.in

https://karnatakaspecial.in/

Related post

Phone icon
Call Now
Reach us!
WhatsApp icon
Chat Now