ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಸಂಚಾರಿ ವಿಜಯ್ ನಟನೆಯ ಕೊನೆಯ ಚಿತ್ರಕ್ಕೆ ರಾಷ್ಟ್ರಪ್ರಶಸ್ತಿ ಗೌರವ
ಕೃಪಾಕರ ನಿರ್ದೇಶನದ ತಲೆದಂಡ ಸಿನಿಮಾದಲ್ಲಿ ವಿಜಯ್ ವಿಶೇಷ ಚೇತನ ವ್ಯಕ್ತಿಯ ಪಾತ್ರದಲ್ಲಿ ಕಾಣಿಸಿಕೊಂಡು ಅಭಿಮಾನಿಗಳ ಮನ ಗೆದ್ದಿದ್ದರು. ಇತ್ತೀಚೆಗಷ್ಟೇ ತೆರೆಕಂಡ ತಲೆದಂಡ ಸಿನಿಮಾದ ನಟನೆಗೆ ವಿಜಯ್ ನ್ಯಾಷನಲ್ ಅವಾರ್ಡ್ ಪಡೆದುಕೊಳ್ಳುತ್ತಾರೆ ಎಂದು ಅಭಿಮಾನಿಗಳು ಎಂದುಕೊಂಡಿದ್ದರು. ಅಂತೆಯೇ ಈ ಸಿನಿಮಾಗೆ ವಿಜಯ್ ಗೆ ರಾಷ್ಟ್ರಪ್ರಶಸ್ತಿ ಲಭಿಸಿದೆ.
ಈ ಹಿಂದೆ ವಿಜಯ್ ನಟನೆಯ ನಾನು ಅವನಲ್ಲ ಅವಳು ಸಿನಿಮಾಗೆ ವಿಜಯ್ ಅತ್ಯುತ್ತಮ ರಾಷ್ಟ್ರ ಪ್ರಶಸ್ತಿ ಪಡೆದುಕೊಂಡಿದ್ದರು. ಇದರ ಜೊತೆಗೆ ಮಂಸೋರೆ ನಿರ್ದೇಶನದ ಹರಿವು, ನಾತಿಚರಾಮಿ ಸಿನಿಮಾಗೂ ವಿಜಯ್ ರಾಷ್ಟ್ರ ಪ್ರಶಸ್ತಿ ಪಡೆದುಕೊಂಡಿದ್ದರು. ಇದೀಗ ವಿಜಯ್ ನಟನೆಯ ನಾಲ್ಕನೇ ಸಿನಿಮಾಗೆ ಸಂಚಾರಿ ವಿಜಯ್ ರಾಷ್ಟ್ರಪ್ರಶಸ್ತಿ ಪಡೆದುಕೊಂಡಿದ್ದಾರೆ.
