ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಬಿಜೆಪಿ ಯುವ ಮೋರ್ಚಾ ಪ್ರವೀಣ್ ನೆಟ್ಟಾರು ಹತ್ಯೆ ಖಂಡಿಸಿದ ಸಿಎಂ ಬೊಮ್ಮಾಯಿ: ಶೀಘ್ರವೇ ಕ್ರಮದ ಭರವಸೆ
ದಾಳಿಯಲ್ಲಿ ಗಂಭೀರ ಗಾಯಗೊಂಡಿದ್ದ ಪ್ರವೀಣ್ ನೆಟ್ಟಾರು ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಮೃತೊಟ್ಟಿದ್ದಾರೆ. ಪ್ರವೀಣ್ ಹತ್ಯೆಯನ್ನು ಖಂಡಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ದುಷ್ಕರ್ಮಿಗಳನ್ನು ಶೀಘ್ರವೇ ಬಂಧಿಸಿ ಕಾನೂನು ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ, ದಕ್ಷಿಣ ಕನ್ನಡ ಜಿಲ್ಲೆ ಸುಳ್ಯದ ನಮ್ಮ ಪಕ್ಷದ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಅವರ ಬರ್ಬರ ಹತ್ಯೆ ಖಂಡನೀಯ. ಇಂಥ ಹೇಯ ಕೃತ್ಯ ಎಸಗಿರುವ ದುಷ್ಕರ್ಮಿಗಳನ್ನು ಶೀಘ್ರವಾಗಿ ಬಂಧಿಸಿ ಕಾನೂನಿನ ಅಡಿಯಲ್ಲಿ ಶಿಕ್ಷಿಸಲಾಗುವುದು. ಪ್ರವೀಣ ಆತ್ಮಕ್ಕೆ ಶಾಂತಿ ಸಿಗಲಿ, ಈ ನೋವನ್ನು ಭರಿಸುವ ಶಕ್ತಿಯನ್ನು ದೇವರು ಅವರ ಕುಟುಂಬಕ್ಕೆ ಕರುಣಿಸಲಿ. ಓಂ ಶಾಂತಿಃ ಎಂದು ಬರೆದುಕೊಂಡಿದ್ದಾರೆ.
