• January 1, 2026

ಸುದೀಪ್ ವಿಶ್ವದ ಬಾಕ್ಸ್ ಆಫೀಸ್ ಗೆಲ್ಲಲಿದ್ದಾರೆ: ರಿಯಲ್ ಸ್ಟಾರ್ ಉಪೇಂದ್ರ

ಕಿಚ್ಚ ಸುದೀಪ್ ನಟನೆಯ ವಿಕ್ರಾಂತ್ ರೋಣ ಸಿನಿಮಾಗೆ ಇನ್ನೊಂದು ದಿನ ಮಾತ್ರವೇ ಭಾಕಿ ಇದೆ. ಸಿನಿಮಾ ಪ್ರಚಾರದಲ್ಲಿ ಚಿತ್ರತಂಡ ಫುಲ್ ಬ್ಯುಸಿಯಾಗಿದ್ದು. ಇದೇ ಶುಕ್ರವಾರ ಸಿನಿಮಾ ರಿಲೀಸ್ ಆಗುತ್ತಿದ್ದು ಅದಕ್ಕೂ ಮೊದಲು ಚಿತ್ರತಂಡ ಬೆಂಗಳೂರಿನಲ್ಲಿ ಇವೆಂಟ್ ಆಯೋಜನೆ ಮಾಡಿದೆ. ಕಾರ್ಯಕ್ರಮದಲ್ಲಿ ಚಿತ್ರತಂಡದ ಜೊತೆ ಅತಿಥಿಯಾಗಿ ರಿಯಲ್ ಸ್ಟಾರ್ ಉಪೇಂದ್ರ ಆಗಮಿಸಿದರು. ಕಾರ್ಯಕ್ರಮದಲ್ಲಿ ನಟ ಉಪೇಂದ್ರ ಅವರನ್ನು ಕೊಂಡಾಡಿದರು. ಕೆಜಿಎಫ್ ಸಿನಿಮಾದ ಮೂಲಕ ಯಶ್ ಇಂಡಿಯಾ ಬಾಕ್ಸ್ ಆಫೀಸ್ ಗೆದ್ದರೆ, ವಿಕ್ರಾಂತ್ ರೋಣ ಚಿತ್ರದ ಮೂಲಕ ಕಿಚ್ಚ ಸುದೀಪ್ ವಿಶ್ವದ ಬಾಕ್ಸ್ ಆಫೀಸ್ ಗೆಲ್ಲಲಿದ್ದಾರೆ. ಅಂಥದ್ದೊಂದು ಭರವಸೆ ನನಗಿದೆ ಎಂದು ಉಪೇಂದ್ರ ಸುದೀಪ್ ರ ಬೆನ್ನು ತಟ್ಟಿದರು. ಸುದೀಪ್ ನಟನೆಯ , ಅನೂಪ್ ಬಂಡಾರಿ ನಿರ್ದೇಶನದ ವಿಕ್ರಾಂತ್ ರೋಣ ಸಿನಿಮಾ ಪ್ಯಾನ್ ಇಂಡಿಯಾ ಚಿತ್ರವಾಗಿದ್ದು ಭಾರತದ ಜೊತೆಗೆ ವಿದೇಶದಲ್ಲೂ ಏಕಕಾಲಕ್ಕೆ ತೆರೆಗೆ ಬರಲಿದೆ. ಕಳೆದ ಎರಡು ಮೂರು ತಿಂಗಳಿನಿಂದಲೂ ವಿದೇಶದಲ್ಲಿ ಸಿನಿಮಾ ಬಿಡುಗಡೆಗೆ ತಯಾರಿ ನಡೆಯುತ್ತಿದ್ದು ಸುಮಾರು 26ರಿಂದ 27 ದೇಶಗಳಲ್ಲಿ ಸಿನಿಮಾ ತೆರೆಗೆ ಬರಲಿದೆ. ಈಗಾಗ್ಲೆ ವಿಕ್ರಾಂತ್ ರೋಣನನ್ನು ಕಣ್ಮುಂಬಿಕೊಳ್ಳಲು ವರ್ಲ್ಡ್ ವೈಡ್ ರೇಂಜ್ ನಲ್ಲಿ ಸಿನಿಮಾದ ಅಡ್ವಾನ್ಸ್ ಬುಕ್ಕಿಂಗ್ ಶುರುವಾಗಿದ್ದು ಎಲ್ಲೆಡೆ ಉತ್ತಮ ರೆಸ್ಪಾನ್ಸ್ ಪಡೆದುಕೊಳ್ತಿದೆ. ಕಳೆದ ಮೂರು ತಿಂಗಳಿನಿಂದ ಪಾಕ್ ನೆಲದಲ್ಲಿ ಕನ್ನಡ ಸಿನಿಮಾಗಳು ಬಿಡುಗಡೆ ಆಗುತ್ತಿದ್ದು ಅಲ್ಲೂ ವಿಕ್ರಾಂತ್ ರೋಣ ಸಿನಿಮಾವನ್ನು ರಿಲೀಸ್ ಮಾಡಲು ಮಾತುಕತೆ ನಡೆಯುತ್ತಿದೆ. ವಿಕ್ರಾಂತ್ ರೋಣ ಸಿನಿಮಾ ವಿಶ್ವದಾದ್ಯಂತ ಏಕಕಾಲಕ್ಕೆ 3200ಕ್ಕೂ ಹೆಚ್ಚು ಸ್ಕ್ರೀನ್ ಗಳಲ್ಲಿ ಬಿಡುಗಡೆ ಆಗುತ್ತಿದೆ. ಕರ್ನಾಟಕದಲ್ಲಿ 425ಕ್ಕೂ ಅಧಿಕ ಥಿಯೇಟರ್ ಗಳಲ್ಲಿ ರಿಲೀಸ್ ಆಗುತ್ತಿದೆ. ವಿಕ್ರಾಂತ್ ರೋಣ ಹಿಂದಿ ವರ್ಷನ್ 900, ತೆಲುಗಿನಲ್ಲಿ 350 ಸ್ಕ್ರೀನ್ ಹಾಗೂ 27 ದೇಶಗಳಲ್ಲಿ 800ಕ್ಕೂ ಅಧಿಕ ಸ್ಕ್ರೀನ್ ಗಳಲ್ಲಿ ವಿಕ್ರಾಂತ್ ರೋಣ ಸಿನಿಮಾ ಬಿಡುಗಡೆ ಆಗಲಿದೆ.

karnatakaspecial.in

https://karnatakaspecial.in/

Related post

Phone icon
Call Now
Reach us!
WhatsApp icon
Chat Now