ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಪ್ರತಿಷ್ಠಿತ “FOG HERO” ಪ್ರಶಸ್ತಿ ಮುಡಿಗೇರಿಸಿಕೊಂಡ ನಟಿ ಮೇಘನಾ ರಾಜ್
ಕಳೆದ ಎರಡು ವರ್ಷಗಳ ನಂತರ (ಕೊರೋನ ನಂತರ) ಈ ಬಾರಿ ಮತ್ತೆ ಅದ್ದೂರಿಯಾಗಿ ಈ ಹಬ್ಬವನ್ನು ಆಯೋಜಿಸಲಾಗಿದೆ. ಪ್ರತಿವರ್ಷ ಈ ಸಂದರ್ಭದಲ್ಲಿ ಭಾರತದಲ್ಲಿ ಸಾಧನೆ ಮಾಡಿರುವ ಗಣ್ಯರೊಬ್ಬರಿಗೆ “FOG HERO” ಅವಾರ್ಡ್” ನೀಡಲಾಗುತ್ತದೆ. ಹೆಚ್ಚಾಗಿ ಚಿತ್ರರಂಗದಲ್ಲಿ ಸಾಧನೆ ಮಾಡಿದವರಿಗೆ ಈ ಪ್ರಶಸ್ತಿ ನೀಡಲಾಗುತ್ತಿದೆ. ಆಶಾ ಪರೇಕ್, ಅಮಿತಾಬ್ ಬಚ್ಚನ್, ದೇವಾನಂದ್, ವಿನೋದ್ ಖನ್ನಾ, ಧರ್ಮೇಂದ್ರ ಮುಂತಾದ ಸಿನಿರಂಗದ ಗಣ್ಯರಿಗೆ ಈ ಪ್ರತಿಷ್ಠಿತ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಈ ಬಾರಿ ದಕ್ಷಿಣ ಭಾರತದ ಖ್ಯಾತ ನಟಿ ಮೇಘನರಾಜ್ “F0G HERO” ಅವಾರ್ಡ್ ಗೆ ಭಾಜನರಾಗಿದ್ದಾರೆ. ಎಂದು ಕಾರ್ಯಕ್ರಮದ ಬಗ್ಗೆ ಹಾಗೂ ಪ್ರಶಸ್ತಿ ಪ್ರದಾನದ ಕುರಿತು ಸಂಸ್ಥೆಯ ಕ್ರಿಸ್ ಮೂರ್ತಿ ಮಾಹಿತಿ ನೀಡಿದರು.
ಅಮಿತಾಭ್ ಬಚ್ಚನ್, ಧರ್ಮೇಂದ್ರ ಮುಂತಾದ ಗಣ್ಯರು ಪಡೆದಿರುವ ಈ ಪ್ರತಿಷ್ಠಿತ ಪ್ರಶಸ್ತಿಗೆ ನಾನು ಭಾಜನಳಾಗಿರುವುದಕ್ಕೆ ತುಂಬಾ ಸಂತೋಷವಾಗಿದೆ. ಅಂತಹ ಮಹಾನ್ ನಟರಿಗೆ ಸಂದಿರುವ ಪ್ರಶಸ್ತಿಗೆ ಈ ಬಾರಿ ನಾನು ಆಯ್ಕೆಯಾಗಿರುವುದು ನನ್ನ ಪುಣ್ಯ. ನನ್ನ ತಂದೆಯ ಮೂಲಕ ಈ ವಿಷಯ ನನಗೆ ತಿಳಿಯಿತು. ಆಗಸ್ಟ್21 ರಂದು ನಡೆಯುವ ಅದ್ದೂರಿ ಸಮಾರಂಭದಲ್ಲಿ ಈ ಪ್ರಶಸ್ತಿ ಸ್ವೀಕರಿಸಲಿದ್ದೇನೆ. ಕನ್ನಡ ಚಿತ್ರರಂಗ ಈಗ ಇಡೀ ವಿಶ್ವದಾದ್ಯಂತ ಜನಪ್ರಿಯ. ಕನ್ನಡಿಗಳಾಗಿ ಈ ಪ್ರಶಸ್ತಿ ಸ್ವೀಕರಿಸುತ್ತಿರುವುದು ನನಗೆ ಹೆಚ್ಚಿನ ಖುಷಿಯಾಗಿದೆ ಎಂದರು ನಟಿ ಮೇಘನರಾಜ್.
